ಆನೆಗಳು ನಾಡಿಗೆ ಬಾರದಂತೆ ತಡೆಯಲು ರೈಲ್ವೇ ಬ್ಯಾರಿಕೇಡ್‌ ಉತ್ತಮ | ಕೇರಳ ಸಚಿವರ ನೇತೃತ್ವದಲ್ಲಿ ಕ್ಯಾಂಪಾ ಹಣಕ್ಕಾಗಿ ಕೇಂದ್ರಕ್ಕೆ ನಿಯೋಗ

August 13, 2024
12:38 PM

ಆನೆಗಳು ನಾಡಿಗೆ ಬಾರದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಉತ್ತಮ ಸಾಧನ. ಇದರ ನಿರ್ಮಾಣಕ್ಕೆ ಹೆಚ್ಚಿನ ಹಣಕಾಸಿನ ಅಗತ್ಯವಿದೆ. ಆದರೆ, ಕೇಂದ್ರ ಸರ್ಕಾರ , ರಾಜ್ಯಕ್ಕೆ ಕೊಡಬೇಕಾದ ಕ್ಯಾಂಪಾ ನಿಧಿಯನ್ನೇ ನೀಡುತ್ತಿಲ್ಲ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಬೇಸರ ವ್ಯಕ್ತಪಡಿಸಿದರು. ಬೆಂಗಳೂರಿನ ಜಿಕೆವಿಕೆ ಆವರಣದಲ್ಲಿ ನಡೆದ ಸಚಿವರ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಕ್ಯಾಂಪಾ ಹಣವನ್ನು ರೈಲ್ವೆ ಬ್ಯಾರಿಕೇಡ್ ಗೆ ಬಿಡುಗಡೆ ಮಾಡುವ ಕುರಿತಂತೆ ಇಂದು ಇಲ್ಲಿ ಪಾಲ್ಗೊಂಡಿರುವ ಎಲ್ಲ ಸಚಿವರೂ ಕೇಂದ್ರ ಹವಾಮಾನ ಬದಲಾವಣೆ, ಪರಿಸರ ಮತ್ತು ಅರಣ್ಯ ಸಚಿವರಿಗೆ ಮನವಿ ಸಲ್ಲಿಸೋಣ ಎಂಬ ಸಲಹೆ ನೀಡಿದರು.

Advertisement
Advertisement
Advertisement

ಆನೆ-ಮಾನವ ಸಂಘರ್ಷ ನಿರ್ವಹಣೆ ಕುರಿತ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅವರ ಅಧ್ಯಕ್ಷತೆಯಲ್ಲಿಂದು ನಡೆದ ಸಚಿವರ ಮಟ್ಟದ ಸಭೆಯಲ್ಲಿ ಅರಣ್ಯ ಸಚಿವರುಗಳಾದ ಎಂ. ಮದಿವೇಂಧನ್ (ತಮಿಳುನಾಡು), ಸಸೀಂದ್ರನ್ (ಕೇರಳ), ಬೈದ್ಯಾನಾಥ್ ರಾಮ್ (ಜಾರ್ಖಂಡ್) ಮತ್ತು ಕೊಂಡ ಸುರೇಖಾ (ತೆಲಂಗಾಣ) ಮತ್ತು ಉನ್ನತ ಐ.ಎಫ್.ಎಸ್. ಅಧಿಕಾರಿಗಳು ಪಾಲ್ಗೊಂಡಿದ್ದರು. ಕೇರಳದ ಅರಣ್ಯ ಸಚಿವ ಎ.ಕೆ. ಸಸೀಂದ್ರನ್ ಈ ಉಪಕ್ರಮದ ನೇತೃತ್ವವನ್ನು ತಾವು ವಹಿಸುವುದಾಗಿ ಸ್ವಯಂ ಪ್ರೇರಿತವಾಗಿ ಪ್ರಕಟಿಸಿದರು. ಮಹಾರಾಷ್ಟ್ರ ಮತ್ತು ಇತರ ರಾಜ್ಯಗಳ ಅರಣ್ಯ ಸಚಿವರನ್ನೂ ಕರೆದುಕೊಂಡು ದೆಹಲಿಗೆ ನಿಯೋಗ ತೆರಳುವ ಮೂಲಕ ಕೇಂದ್ರ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲು ದಿನಾಂಕ ನಿಗದಿ ಮಾಡುವಂತೆ ಈಶ್ವರ ಖಂಡ್ರೆ ತಿಳಿಸಿದರು. ಸಭೆ ಸಮ್ಮತಿಸಿತು.

Advertisement

ಲಾಂಟನಾ ಮತ್ತು ಸನ್ನಾ ಸಮಸ್ಯೆ ಪರಿಹಾರಕ್ಕೆ ಬೇರೆ ರಾಜ್ಯಗಳಲ್ಲಿ ಕೈಗೊಂಡಿರುವ ಕ್ರಮಗಳ ಕುರಿತ ಚರ್ಚೆ ಮಾಡಲಾಯ್ತು. ನಿರಂತರವಾಗಿ ಲಾಂಟನಾವನ್ನು ಮೂಲೋತ್ಪಾಟನೆ ಮಾಡುವುದೇ ಪರಿಹಾರ ಎಂದು ಅಭಿಪ್ರಾಯ ವ್ಯಕ್ತವಾಯಿತು. ಕೆಲವು ಆದಿವಾಸಿಗಳು ಲಾಂಟನಾದಿಂದ ಅಲಂಕಾರಿಕ ವಸ್ತು ಮತ್ತು ವನ್ಯಮೃಗಗಳ ಪ್ರತಿಕೃತಿ ನಿರ್ಮಾಣ ಮಾಡುತ್ತಿದ್ದು, ಅವರೇ ಸ್ವತಃ ಮುಂದೆ ಬಂದು ಲಾಂಟನಾ ಕಳೆ ತೆಗೆಯುವುದಾದರೆ ಅವರಿಗೆ ಅವಕಾಶ ಕೊಡುವ ಬಗ್ಗೆಯೂ ಚರ್ಚಿಸಲಾಯಿತು. ಆನೆ-ಮಾನವ ಸಂಘರ್ಷದಲ್ಲಿ ಮೃತಪಟ್ಟವರಿಗೆ ಮತ್ತು ಬೆಳೆ ನಷ್ಟಕ್ಕೊಳಗಾದವರಿಗೆ ನೀಡಲಾಗುತ್ತಿರುವ ಪರಿಹಾರ, ಆನೆಗಳು ನಾಡಿಗೆ ಬಾರದಂತೆ ತಡೆಯಲು ಯಾವ ಯಾವ ರಾಜ್ಯದಲ್ಲಿ ಯಾವ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬ ಬಗ್ಗೆ ಈಶ್ವರ ಖಂಡ್ರೆ ಅವರು ಇತರ ರಾಜ್ಯಗಳ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಸಮಾಲೋಚಿಸಿ ಮಾಹಿತಿ ಪಡೆದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕ್ಯಾಂಪ್ಕೋ ತಯಾರಿಕೆಯ ಕೊಬ್ಬರಿ ಎಣ್ಣೆ “ಕಲ್ಪ” 5 ಲೀಟರ್ ಕ್ಯಾನ್ ಬಿಡುಗಡೆ
January 16, 2025
3:11 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 15-01-2025 | ಕೆಲವು ಕಡೆ ಇಂದೂ ತುಂತುರು ಮಳೆ ಸಾಧ್ಯತೆ |
January 15, 2025
1:00 PM
by: ಸಾಯಿಶೇಖರ್ ಕರಿಕಳ
ರಾಜ್ಯದಿಂದ 3.5 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಖರೀದಿಗೆ ಕೇಂದ್ರ ಸರ್ಕಾರ ಸಮ್ಮತಿ
January 15, 2025
6:47 AM
by: The Rural Mirror ಸುದ್ದಿಜಾಲ
ಸಂಕ್ರಾಂತಿ ಸಂಭ್ರಮ ಕಾರ್ಯಕ್ರಮಕ್ಕೆ  ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಚಾಲನೆ
January 15, 2025
6:42 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror