ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ, ಶೃಂಗೇರಿ, ಎನ್.ಆರ್.ಪುರ ಸೇರಿ ಮಲೆನಾಡು ಭಾಗದಲ್ಲಿ ಉಂಟಾಗುತ್ತಿರುವ ಕಾಡಾನೆಗಳ ಹಾವಳಿ ತಪ್ಪಿಸಲು ರೈಲ್ವೆ ಬ್ಯಾರಿಕೇಡ್ ನಿರ್ಮಿಸಿ ಶಾಶ್ವತ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡ ತಿಳಿಸಿದ್ದಾರೆ. ಶೃಂಗೇರಿ ತಾಲೂಕಿನ ಶೆಟ್ಟಿ ಕೊಪ್ಪ ಭದ್ರಾ ಕಾಲೊನಿಯಲ್ಲಿ ಕಾಡಾನೆಗಳು ದಾಳಿ ನಡೆಸಿದ ಕೃಷಿ ಭೂಮಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಭಾಗದಲ್ಲಿ ಕಾಡಾನೆಗಳಿಂದ ಉಂಟಾಗುತ್ತಿರುವ ಸಮಸ್ಯೆಗಳ ಬಗ್ಗೆ ರಾಜ್ಯ ಸರ್ಕಾರ ಮತ್ತು ಅರಣ್ಯ ಸಚಿವರಿಗೆ ಮಾಹಿತಿ ನೀಡಲಾಗಿದೆ ಎಂದರು. ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ 20 ಕೋಟಿ ರೂಪಾಯಿ ವೆಚ್ಚವಾಗಲಿದ್ದು, ಶೀಘ್ರವಾಗಿ ಕಾಮಗಾರಿ ಕೈಗೊಳ್ಳಲಾಗುವುದು ಎಂದು ಅವರು ಮಾಹಿತಿ ನೀಡಿದರು.
ರಾಜ್ಯದ ದಕ್ಷಿಣ ಕರಾವಳಿ, ಮಲೆನಾಡು ಭಾಗಗಳಲ್ಲಿ ಬೇಸಿಗೆ ಮಳೆಯು ಮುಂದುವರಿಯುವ ಲಕ್ಷಣಗಳಿವೆ. ಉತ್ತರ…
ರಾಜಕೀಯ ಎನ್ನುವುದು ಕೃಷಿ ಹಾಗೂ ಅಡಿಕೆ ಬೆಳೆಗಾರರ ವಿಚಾರದಲ್ಲಿ ಕೂಡಾ ಹೇಗೆ ಇರುತ್ತದೆ,…
ಮನುಷ್ಯನಿಗೆ ಆಹಾರ, ನಿದ್ರೆಗಳು ಸಹಜ. ವಯೋವೃದ್ಧರಿಗೆ ಬೋಜನದ ನಂತರದ ನಿದ್ರೆಯಿಂದ ಮೈಮನಗಳಿಗೆ ಸ್ಫೂರ್ತಿ.…
ದಾವಣಗೆರೆ ಜಿಲ್ಲೆಯ 6 ತಾಲೂಕುಗಳಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಬಹುದಾದ 197…
ಯಾದಗಿರಿ ಜಿಲ್ಲೆಯಲ್ಲಿ ಮುಂದಿನ ಮೂರು ತಿಂಗಳಿನಲ್ಲಿ ಗರಿಷ್ಠ 45 ಡಿಗ್ರಿ ಸೆಲ್ಸಿಯಸ್ ತಾಪಮಾನ…
ವಿಶ್ವವಿಖ್ಯಾತ ಜೋಗ ಜಲಪಾತ ಪ್ರದೇಶದ ವ್ಯಾಪ್ತಿಯಲ್ಲಿ ಪ್ರವಾಸಿಗರಿಗೆ ಮೂಲಸೌಲಭ್ಯ ಒದಗಿಸಲು ಸಮಗ್ರ ಅಭಿವೃದ್ಧಿ…