ಕೊಂಕಣ ರೈಲಿನ ವಿಲೀನಕ್ಕೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಸಹಮತ ವ್ಯಕ್ತಪಡಿಸಿದ್ದಾರೆ ಎಂದು ಉಡುಪಿ ಚಿಕ್ಕಮಗಳೂರು ಸಂಸದ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ನವದೆಹಲಿಯ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಸಂಸದರಾದ ಕೋಟಾ ಶ್ರೀನಿವಾಸ ಪೂಜಾರಿ, ವಿಶ್ವೇಶ್ವರ ಹೆಗಡೆ ಕಾಗೇರಿ ಕ್ಯಾಪ್ಟನ್ ಬ್ರಿಜೇಶ್ ಚೌಟ, ಡಾ.ಸಿ.ಎನ್.ಮಂಜುನಾಥ್ ಭೇಟಿಯಾಗಿ ಸಕಲೇಶಪುರ ಘಾಟ್‌ನಲ್ಲಿರುವ ರೈಲ್ವೆ ಮಾರ್ಗದ ಸಮಸ್ಯೆಗೆ ಪರಿಣಿತರಿಂದ ಸೂಚಿಸಲ್ಪಟ್ಟ ಪರಿಹಾರದ ಬಗ್ಗೆ ಪ್ರಸ್ತಾಪಿಸಿದ್ದಾರೆ. ಕೊಂಕಣ ರೈಲ್ವೆಯು ಸಚಿವಾಲಯದೊಂದಿಗೆ ವಿಲೀನ ಕುರಿತಂತೆ ಮುಂದಿನ ಹಂತದ ಬಗ್ಗೆ ಪಾಲುದಾರಿಕೆ ರಾಜ್ಯಗಳಾದ ಕರ್ನಾಟಕ, ಕೇರಳ, ಗೋವಾ, ಮಹಾರಾಷ್ಟ್ರ ಷೇರು ಮರು ಖರೀದಿಗೆ ಕಾರ್ಯಪ್ರವೃತ್ತರಾಗಲು ಮನವಿ ಮಾಡಲಾಗಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel