ಹೆಚ್ಚಿದ ಮಳೆಯಬ್ಬರ | ಕೇರಳ-ತಮಿಳುನಾಡಿನಲ್ಲಿ ಭಾರೀ ಮಳೆ | 24 ಗಂಟೆಗಳಲ್ಲಿ ಸರಾಸರಿ 109.53 ಮಿಮೀ ಮಳೆ |

November 14, 2021
3:47 PM

ಕೇರಳ ಹಾಗೂ ತಮಿಳುನಾಡಿನಲ್ಲಿ ಭಾರೀ ಮಳೆಯಾಗುತ್ತಿದೆ. ಸದ್ಯ ತಮಿಳುನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಿದ್ದರೆ ಕೇರಳದ ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು,  ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ (24 ಗಂಟೆಗಳಲ್ಲಿ 20 ಸೆಂ.ಮೀ.ಗಿಂತ ಹೆಚ್ಚು), ಕರಾವಳಿ ಕರ್ನಾಟಕದಲ್ಲೂ ಭಾರೀ ಮಳೆ ಸಾಧ್ಯತೆ ಇದೆ  ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

Advertisement
Advertisement
Advertisement

ಎರ್ನಾಕುಲಂ, ಇಡುಕ್ಕಿ ಮತ್ತು ತ್ರಿಶೂರ್ ರೆಡ್ ಅಲರ್ಟ್‌ನಲ್ಲಿದ್ದರೆ, ಇತರ ಎಂಟು ಜಿಲ್ಲೆಗಳಾದ – ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ, ಆಲಪ್ಪುಳ, ಕೊಟ್ಟಾಯಂ, ಕೋಝಿಕ್ಕೋಡ್, ಕಣ್ಣೂರು ಮತ್ತು ಕಾಸರಗೋಡು ಪ್ರದೇಶದಲ್ಲಿ ಭಾರೀ ಮಳೆಯಾಗಲಿದ್ದು (11-20 ಸೆಂ.ಮೀ) ಆರೆಂಜ್ ಅಲರ್ಟ್‌ ಫೋಷಣೆ ಮಾಡಲಾಗಿದೆ. ತಮಿಳುನಾಡು, ಪುದುಚೇರಿ ಮತ್ತು ಕೇರಳ, ಮಾಹೆ,  ಕರಾವಳಿ ಕರ್ನಾಟಕ  ಭಾರೀ ಮಳೆ ಸಾಧ್ಯತೆ ಪ್ರದೇಶಗಳು.

Advertisement

 

Advertisement

ಕನ್ಯಾಕುಮಾರಿಯಲ್ಲಿ ಸತತ ಮೂರನೇ ದಿನವೂ ಭಾರಿ ಮಳೆಯಾಗುತ್ತಿದ್ದು, ಭಾನುವಾರ ಬೆಳಗ್ಗೆ 8 ಗಂಟೆವರೆಗಿನ 24 ಗಂಟೆಗಳಲ್ಲಿ ಜಿಲ್ಲೆಯಲ್ಲಿ ಸರಾಸರಿ 109.53 ಮಿಮೀ ಮಳೆ ದಾಖಲಾಗಿದೆ. ಜಿಲ್ಲೆಯ 14 ಸ್ಥಳಗಳಲ್ಲಿ 100 ಮಿ.ಮೀ ಗಿಂತ ಹೆಚ್ಚು ಮಳೆ ದಾಖಲಾಗಿದ್ದು, ಮೂರು ಸ್ಥಳಗಳಲ್ಲಿ ತಲಾ 210 ಮಿ.ಮೀ. ಭಾನುವಾರ ಬೆಳಗಿನ ಜಾವದವರೆಗೆ 72 ಗುಡಿಸಲುಗಳು ಹಾನಿಗೊಳಗಾಗಿದ್ದು, 3,200ಕ್ಕೂ ಹೆಚ್ಚು ಜನರನ್ನು ಜಲಾವೃತ ಪ್ರದೇಶಗಳಿಂದ ಸ್ಥಳಾಂತರಿಸಲಾಗಿದೆ ಎಂದು ವರದಿಯಾಗಿದೆ. 3,000 ಕ್ಕೂ ಹೆಚ್ಚು ಜನರು ಇನ್ನೂ ಪರಿಹಾರ ಶಿಬಿರಗಳಲ್ಲಿ ವಾಸಿಸುತ್ತಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

Advertisement

ಭಾರೀ ಮಳೆಯಿಂದಾಗಿ ಕೇರಳ ರಾಜ್ಯದ ವಿವಿಧ ಅಣೆಕಟ್ಟುಗಳಲ್ಲಿ ನೀರಿನ ಮಟ್ಟವು ರೆಡ್ ಅಲರ್ಟ್ ಮಾರ್ಕ್‌ಗೆ ಏರಿದ್ದು, ಇಡುಕ್ಕಿ ಜಲಾಶಯದ  ಅಣೆಕಟ್ಟಿನ ಒಂದು ಶಟರ್ ಅನ್ನು ತೆರೆಯಲು ಅಧಿಕಾರಿಗಳು ತಿಳಿಸಿದ್ದಾರೆ.

ಈಗಿನ ಹವಾಮಾನ ವರದಿ ಪ್ರಕಾರ  ದಕ್ಷಿಣ ಕೇರಳ ಮತ್ತು ತಮಿಳುನಾಡಿನಲ್ಲಿ ಭಾನುವಾರ ಮತ್ತು ಸೋಮವಾರದಂದು ಕೇರಳದ ಮೇಲೆ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

Advertisement

 

ಅಂಡಮಾನ್ ಸಮುದ್ರದ ಮಧ್ಯ ಭಾಗಗಳಲ್ಲಿ ವಾಯುಭಾರ ಕುಸಿತ ಬಲಗೊಂಡಿದ್ದು  ಇದರ ಕಾರಣದಿಂದ ಕೇರಳ ಮತ್ತು ದಕ್ಷಿಣ ತಮಿಳುನಾಡಿನಲ್ಲಿ ಮಳೆಯ ಪ್ರಮಾಣವು ಮುಂದುವರಿದು ನಂತರ ಕಡಿಮೆಯಾಗುವ ಸಾಧ್ಯತೆಯಿದೆ. ಇದರ ಪರಿಣಾಮವಾಗಿ ಕರಾವಳಿ ಕರ್ನಾಟಕದ ಕಾಸರಗೋಡು ಭಾಗದಿಂದ ಮಳೆಯ ಅಬ್ಬರ ಹೆಚ್ಚಾಗಲಿದೆ.

Advertisement

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

Karnataka Weather | 28-03-2024 | ಕೆಲವು ಕಡೆ ತುಂತುರು ಮಳೆ | ಮಾ.31 ನಂತರ ಕೆಲವು ಕಡೆ ಸಾಮಾನ್ಯ ಮಳೆ ನಿರೀಕ್ಷೆ |
March 28, 2024
1:19 PM
by: ಸಾಯಿಶೇಖರ್ ಕರಿಕಳ
ಬರ ಹಿನ್ನೆಲೆ | ಮೈಸೂರು ಜಿಲ್ಲೆಯಲ್ಲಿ ಪಂಪ್‌ಸೆಟ್ ಬಳಸಿ ಕೃಷಿಗೆ ನದಿ ನೀರು ಬಳಕೆ ನಿಷೇಧ |
March 27, 2024
10:01 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಆಮದು ಪ್ರಕರಣಗಳಲ್ಲಿ ದೂರು ದಾಖಲಾಗುತ್ತಿಲ್ಲವೇಕೆ…? | ಆರೋಪಿಗಳು ಪತ್ತೆಯಾಗುತ್ತಿಲ್ಲವೇಕೆ…? |
March 27, 2024
9:32 PM
by: ದ ರೂರಲ್ ಮಿರರ್.ಕಾಂ
Karnataka Weather | 27-03-2024 | ರಾಜ್ಯದಲ್ಲಿ ಒಣ ಹವೆ | ಕೆಲವು ಕಡೆ ತುಂತುರು ಮಳೆ ಸಾಧ್ಯತೆ |
March 27, 2024
12:49 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror