ಕೇರಳದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಿದೆ. ಮುಂದಿನ ಕೆಲವು ದಿನಗಳ ಕಾಲ ಕೇರಳ ಮತ್ತು ಲಕ್ಷದ್ವೀಪ ಸೇರಿದಂತೆ ಹಲವು ಕಡೆಗಳಲ್ಲಿ ಮಳೆಯಾಗಲಿದೆ. ಅದರ ಜೊತೆಗೇ ನೈಋತ್ಯ ಮಾನ್ಸೂನ್ ದಕ್ಷಿಣ ಅಂಡಮಾನ್ ಸಮುದ್ರ ಮತ್ತು ಪಕ್ಕದ ಆಗ್ನೇಯ ಬಂಗಾಳ ಕೊಲ್ಲಿಗೆ ಆಗಮಿಸುವ ಸಾಧ್ಯತೆ ಇದೆ.
ಕೇರಳ ಮತ್ತು ಲಕ್ಷದ್ವೀಪ ಸೇರಿದಂತೆ ಹಲವೆಡೆ ಹೆಚ್ಚಿನ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು ಮಲಪ್ಪುರಂ, ಕೋಯಿಕ್ಕೋಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳು ಸೇರಿದಂತೆ ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆಯ ಎಚ್ಚರಿಕೆಯನ್ನು ನೀಡಿದ್ದು, ಆರೆಂಜ್ ಅಲರ್ಟ್ ಘೋಷಿಸಿದೆ. ಉಳಿದಂತೆ ಎಲ್ಲಾ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಪ್ರದೇಶಗಳಲ್ಲಿ ದಿನವಿಡೀ ಮೋಡದ ವಾತಾವರಣ ಹಾಗೂ ತುಂತುರು ಮಳೆ ಕಂಡುಬಂದಿತ್ತು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel