ಜೂನ್ ಮೊದಲ ವಾರದಲ್ಲಿಯೇ ನೈಋತ್ಯ ಮುಂಗಾರು ಕರ್ನಾಟಕಕ್ಕೆ ಆಗಮಿಸಿದ್ದರೂ ಕಳೆದ 1೦ ದಿನಗಳಿಂದಲೂ ಮಳೆ ಸರಿಯಾಗಿ ಸುರಿದಿಲ್ಲ. ಮುಂಗಾರು ದುರ್ಬಲವಾಗಿದೆ. ಇನ್ನಷ್ಟು ಕ್ಷೀಣವಾಗುವ ಸಾಧ್ಯತೆ ಇದೆ. ಈ ನಡುವೆ ಮುಂದಿನ ಮೂರು ದಿನಗಳ ಕಾಲ ಕರಾವಳಿ ಪ್ರದೇಶದಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಭಾನುವಾರ ಇಡೀ ದಿನ ಕರಾವಳಿ ಪ್ರದೇಶದ ಹಲವು ಕಡೆಗಳಲ್ಲಿ ಉತ್ತಮ ಮಳೆಯಾಗಿದೆ.
Advertisement
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಜೂನ್ 14ರ ತನಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸೇರಿದಂತೆ ಮಳೆಯಾಗಲಿದೆ ಎಂದು ಹೇಳಿದೆ. ಮುಂದಿನ ಎರಡು ದಿನಗಳಲ್ಲಿ ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಬಹುದು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement