Advertisement
ಸುದ್ದಿಗಳು

ಕರಾವಳಿ ಜಿಲ್ಲೆಯ ಹಲವೆಡೆ 100+ ಮಿಮೀ ಮಳೆ | ಕರಾವಳಿ ಜಿಲ್ಲೆಗಳಲ್ಲಿ ಆರೆಂಜ್‌ ಎಲರ್ಟ್‌ |

Share
ಕಳೆದ 24 ಗಂಟೆಯಲ್ಲಿ ಸುಳ್ಯ ತಾಲೂಕು ಸೇರಿದಂತೆ ಹಲವು ಕಡೆಗಳಲ್ಲಿ ಉತ್ತಮ‌ ಮಳೆಯಾಗಿದೆ. ನಿರಂತರ ಮಳೆ ಸುರಿಯುತ್ತಿದ್ದು ಹಲವು ಕಡೆಗಳಲ್ಲಿ 100 ಮಿಮೀಗಿಂತ ಅಧಿಕ ಮಳೆಯಾಗಿದೆ. ಕೊಡಗು ಜಿಲ್ಲೆಯ ಚೆಂಬುವಿನಲ್ಲಿ 163 ಮಿಮೀ ಮಳೆ ದಾಖಲಾಗಿದೆ. ಉಳಿದಂತೆ ಹಲವು ಕಡೆ 100 ಮಿಮೀ ಗಿಂತಲೂ ಅಧಿಕ ಮಳೆ ಸುರಿದಿದೆ. ಎರಡು ದಿನಗಳ ಕಾಲ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ನಿರೀಕ್ಷೆ ಮಾಡಲಾಗಿದ್ದು ಆರೆಂಜ್‌ ಎಲರ್ಟ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಕಳೆದ 24 ಗಂಟೆಗಳಲ್ಲಿ ಕೊಡಗು ಜಿಲ್ಲೆಯ ಚೆಂಬುವಿನಲ್ಲಿ 163 ಮಿಮೀ ಮಳೆಯಾದರೆ ಮಡಪ್ಪಾಡಿ 140 ಮಿಮೀ, ಗುತ್ತಿಗಾರು 111 ಮಿಮೀ, ಕಮಿಲ 113 ಮಿಮೀ , ಬಾಳಿಲ 126 ಮಿಮೀ , ಕೊಲ್ಲಮೊಗ್ರ 101 ಮಿಮೀ, ಕಲ್ಮಡ್ಕ 124 ಮಿಮೀ,  ಬಳ್ಪ 139 ಮಿಮೀ, ಬಂಟ್ವಾಳ 92 ಮಿಮೀ, ಕಲ್ಲಾಜೆ 143 ಮಿಮೀ, ಮಂಗಳೂರು 51 ಮಿಮೀ, ಸುಬ್ರಹ್ಮಣ್ಯ 134 ಮಿಮೀ , ಬೆಳ್ತಂಗಡಿ 183  ಮಿಮೀ, ಕೊಪ್ಪ 103 ಮಿಮೀ, ಮಂಚಿ 105 ಮಿಮೀ,   ಕೋಡಪದವು 92 ಮಿಮೀ,  ಪುತ್ತೂರು ಮುಂಡೂರು 140 ಮಿಮೀ ಮಳೆಯಾಗಿದೆ.

ಕರಾವಳಿ ಜಿಲ್ಲೆಗಳಾದ ಮಂಗಳೂರು, ಉಡುಪಿ,  ಹಾಗೂ ಉತ್ತರಕನ್ನಡ, ಕೊಡಗು,  ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರೀ ಮಳೆ ನಿರೀಕ್ಷೆ ಮಾಡಲಾಗಿದೆ. ಹೀಗಾಗಿ ಹೈ ಎಲರ್ಟ್‌ ಹವಾಮಾನ ಇಲಾಖಾ ಸೂಚಿಸಿದೆ.  ಸತತ ಎರಡು ದಿನಗಳಿಂದ ಜಿಲ್ಲೆಯ ಹಲವು ಭಾಗಗಳಲ್ಲಿ ಮಳೆ ಹೆಚ್ಚಾಗಿ ನದಿಗಳು, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ಮುನ್ನಚ್ಚೆರಿಕೆ ಕ್ರಮವಾಗಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ 4 ದಿನಗಳ ಕಾಲ ರಜೆ ಘೋಷಣೆ ಮಾಡಲಾಗಿದೆ. ಕೊಡಗು ಜಿಲ್ಲೆಯಲ್ಲೂ ಮಳೆ ಅವಾಂತರದಿಂದ ಹಾನಿಯಾಗಿದೆ. ಭಾರೀ ಮಳೆಗೆ ಸೋಮವಾರಪೇಟೆ ತಾಲೂಕಿನಲ್ಲಿ  ಮನೆಯೊಂದು ಬಿರುಕು ಬಿಟ್ಟಿದೆ. ಉತ್ತರಕನ್ನಡ ಜಿಲ್ಲೆಯಲ್ಲೂ ಭಾರೀ ಮಳೆಯಿಂದ ಹಾನಿಯಾಗಿದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…

5 hours ago

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ

ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…

20 hours ago

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

1 day ago

ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ

ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…

1 day ago