ಮುಂದುವರಿದ ಮಳೆಯಬ್ಬರ | ಇಂದು ಕರಾವಳಿ ಜಿಲ್ಲೆಯಲ್ಲಿ ಯೆಲ್ಲೊಎಲರ್ಟ್ |

July 17, 2022
10:16 AM
ರಾಜ್ಯದ ವಿವಿಧೆಡೆ ಮಳೆ ಆರ್ಭಟ ಮುಂದುವರೆದಿದೆ. ಕಳೆದ. 24. ಗಂಟೆಯಲ್ಲಿ ಕರಾವಳಿ ಜಿಲ್ಲೆಯ ಹಲವು ಕಡೆಗಳಲ್ಲಿ 100 ಮಿಮೀ ಗಿಂತ ಅಧಿಕ ಮಳೆಯಾಗಿದೆ.
ಎಲ್ಲೆಲ್ಲಿ ಎಷ್ಟು ಮಳೆ
  • ಕೊಲ್ಲಮೊಗ್ರು   91.4 ಮಿಮೀ
  • ಸುಳ್ಯ ನಗರ  115ಮಿಮೀ
  • ಬಂಗಾರಡ್ಕ (ಆರ್ಯಾಪು)  80ಮಿಮೀ
  • ಕಲ್ಲಾಜೆ  150ಮಿಮೀ
  • ಬಾಳಿಲ  108ಮಿಮೀ
  • ಬಳ್ಪ  155ಮಿಮೀ
  • ಕಮಿಲ (ಪುಚ್ಚಪ್ಪಾಡಿ)  132ಮಿಮೀ
ರಾಜ್ಯದ ವಿವಿಧೆಡೆ ಇಂದು ಮತ್ತು ನಾಳೆ ಭಾರೀ ಮಳೆಯಾಗಲಿದ್ದು, ಮಂಗಳವಾರದಿಂದ ರಾಜ್ಯಾದ್ಯಂತ ಮಳೆ ಪ್ರಮಾಣ ಕಡಿಮೆಯಾಗುತ್ತದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನೈರುತ್ಯ ಮುಂಗಾರು ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಚುರುಕಾಗಿದೆ. ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಬಹುತೇಕ ಕಡೆ ಮಳೆಯಾಗಲಿದೆ. ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಬೀದರ್, ಕಲಬುರಗಿ, ಬೆಳವಾಗಿ ಹಾಗೂ ಹಾಸನ ಜಿಲ್ಲೆಯಲ್ಲಿ ಇಂದು ಯೆಲ್ಲೊ ಆಲರ್ಟ್ ಘೋಷಿಸಲಾಗಿದೆ.
ಕರಾವಳಿ ತೀರದಲ್ಲಿ ಗಂಟೆಗೆ 40 ಕಿಲೋ ಮೀಟರ್ ನಿಂದ 50 ಕಿಲೋ ಮೀಟರ್ ವರೆಗೆ ಗಾಳಿ ಬೀಸಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ಸೂಚನೆ ನೀಡಲಾಗಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬೀದಿ ನಾಯಿಗಳ ಸಮಸ್ಯೆ | 27,481 ನಾಯಿ ಕಡಿತ ಪ್ರಕರಣಗಳು ವರದಿ..!
March 28, 2026
11:07 AM
by: ಮಿರರ್‌ ಡೆಸ್ಕ್
ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!
March 26, 2026
7:04 AM
by: ದ ರೂರಲ್ ಮಿರರ್.ಕಾಂ
ಮಾರ್ಚ್‌ನಲ್ಲಿ‌ ಮಳೆ ಶಾಕ್….! ರೈತರಿಗೆ ನಷ್ಟದ ಭೀತಿ
March 23, 2026
7:01 AM
by: ದ ರೂರಲ್ ಮಿರರ್.ಕಾಂ
ಕೃಷಿಕರಿಗೂ ಇದೆ ಹೋರ್ಮುಜ್‌ ಸಂಕಷ್ಟ…! ರಸಗೊಬ್ಬರ ಪೂರೈಕೆ ಆತಂಕ…? | ಪ್ರಧಾನಿ ನೇತೃತ್ವದಲ್ಲಿ ಸಭೆ
March 22, 2026
8:47 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror