ರಾಜ್ಯದ ವಿವಿದೆಡೆ ಬುಧವಾರ ಸಂಜೆ ಉತ್ತಮ ಮಳೆಯಾಗಿದೆ. ದ ಕ ಜಿಲ್ಲೆಯಲ್ಲಿ ಗುಡುಗು -ಸಿಡಿಲು ಸಹಿತ ಭಾರೀ ಮಳೆಯಾದರೆ ವಿಜಯಪುರದಲ್ಲಿ ಸಿಡಿಲಿಗೆ ಮೂವರು ಬಲಿಯಾಗಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಸುಳ್ಯ ಪ್ರದೇಶದ ಹಲವು ಕಡೆಗಳಲ್ಲಿ ಉತ್ತಮ ಮಳೆಯಾಗಿದೆ. ಬೆಳ್ತಂಗಡಿಯ ಹಲವು ಕಡೆ ಸಿಡಿಲು ಬಡಿದು ಮನೆಗಳಿಗೆ ಹಾನಿಯಾದರೆ ಗಾಳಿಗೆ ಮರ ಬಿದ್ದು ರಸ್ತೆ ತಡೆಯಾಗಿತ್ತು. ತಣ್ಣೀರುಪಂತದಲ್ಲಿ ಆಲಿಕಲ್ಲು ಸಹಿತ ಮಳೆಯಾಗಿದೆ. ಮಳೆ ಗಾಳಿಗೆ ವಿದ್ಯುತ್ ಕೈಕೊಟ್ಟಿದ್ದು ನಗರ ಸೇರಿದಂತೆ ಗ್ರಾಮೀಣ ಭಾಗ ಕತ್ತಲಲ್ಲಿದೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಿದ್ದು ಚನ್ನಪಟ್ಟಣ , ಹಾಸನ ಮೊದಲಾದ ಕಡೆಗಳಲ್ಲಿ ಕೂಡಾ ಮಳೆಯಾಗಿದ್ದು ವಿಜಯಪುರ ನಗರದಲ್ಲಿ ಸಿಡಿಲು ಬಡಿದು ಮೂವರು ಮೃತಪಟ್ಟಿದ್ದಾರೆ. ಮೃತರನ್ನು ಅಶೋಕ ರಾಮು , ಭಾಸಾಬ್ ಕರ್ಜಗಿ, ಜಾವೀದ್ ಹದೀಲ್ ಜಾಲಗೇರಿ ಎಂದು ಗುರುತಿಸಲಾಗಿದೆ.

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕಲೆ, ಸಾಹಿತ್ಯ, ಧಾರ್ಮಿಕ, ಕೃಷಿ, ವಿಶೇಷ ಲೇಖನ , ಅಂಕಣ, ವಿಶೇಷ ವರದಿಗಳು , ರಾಜಕೀಯ ವಿಶ್ಲೇಷಣೆ, ದಿನದ ಫೋಕಸ್ ಸ್ಟೋರಿ, ದಿನದ ಚಿತ್ರ, ವಾರದ ವ್ಯಕ್ತಿ , ಜಿಲ್ಲೆ, ರಾಜ್ಯ, ರಾಷ್ಟ್ರೀಯ ಪ್ರಮುಖ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ರಾಜ್ಯದ ವಿವಿದೆಡೆ ಮಳೆ | ದ ಕ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆ | ವಿಜಯಪುರದಲ್ಲಿ ಸಿಡಿಲಿಗೆ ಮೂವರು ಬಲಿ |"