ರಾಜ್ಯದ ವಿವಿದೆಡೆ ಬುಧವಾರ ಸಂಜೆ ಉತ್ತಮ ಮಳೆಯಾಗಿದೆ. ದ ಕ ಜಿಲ್ಲೆಯಲ್ಲಿ ಗುಡುಗು -ಸಿಡಿಲು ಸಹಿತ ಭಾರೀ ಮಳೆಯಾದರೆ ವಿಜಯಪುರದಲ್ಲಿ ಸಿಡಿಲಿಗೆ ಮೂವರು ಬಲಿಯಾಗಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಸುಳ್ಯ ಪ್ರದೇಶದ ಹಲವು ಕಡೆಗಳಲ್ಲಿ ಉತ್ತಮ ಮಳೆಯಾಗಿದೆ. ಬೆಳ್ತಂಗಡಿಯ ಹಲವು ಕಡೆ ಸಿಡಿಲು ಬಡಿದು ಮನೆಗಳಿಗೆ ಹಾನಿಯಾದರೆ ಗಾಳಿಗೆ ಮರ ಬಿದ್ದು ರಸ್ತೆ ತಡೆಯಾಗಿತ್ತು. ತಣ್ಣೀರುಪಂತದಲ್ಲಿ ಆಲಿಕಲ್ಲು ಸಹಿತ ಮಳೆಯಾಗಿದೆ. ಮಳೆ ಗಾಳಿಗೆ ವಿದ್ಯುತ್ ಕೈಕೊಟ್ಟಿದ್ದು ನಗರ ಸೇರಿದಂತೆ ಗ್ರಾಮೀಣ ಭಾಗ ಕತ್ತಲಲ್ಲಿದೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಿದ್ದು ಚನ್ನಪಟ್ಟಣ , ಹಾಸನ ಮೊದಲಾದ ಕಡೆಗಳಲ್ಲಿ ಕೂಡಾ ಮಳೆಯಾಗಿದ್ದು ವಿಜಯಪುರ ನಗರದಲ್ಲಿ ಸಿಡಿಲು ಬಡಿದು ಮೂವರು ಮೃತಪಟ್ಟಿದ್ದಾರೆ. ಮೃತರನ್ನು ಅಶೋಕ ರಾಮು , ಭಾಸಾಬ್ ಕರ್ಜಗಿ, ಜಾವೀದ್ ಹದೀಲ್ ಜಾಲಗೇರಿ ಎಂದು ಗುರುತಿಸಲಾಗಿದೆ.
ಸಣ್ಣ ಹಿಡುವಳಿದಾರರಿಗೆ ಈಗ ಕಾಳುಮೆಣಸು ಕೃಷಿಯ ಬಗ್ಗೆ ಸಾಕಷ್ಟು ಗೊಂದಲ. ಇಂತಹ ಸಮಯದಲ್ಲಿ…
ಪಶ್ಚಿಮ ಬಂಗಾಳದಲ್ಲಿ ಉಂಟಾಗಿರುವ ಸಣ್ಣ ಪ್ರಮಾಣದ ತಿರುಗುವಿಕೆಯು ಅಷ್ಟೇನು ಪರಿಣಾಮ ಬೀರುವ ಸಾಧ್ಯತೆಗಳು…
ಜೋಯಿಡಾ ತಾಲೂಕಿನ ಬಜಾರಕುಣಂಗ ಗ್ರಾಮ ಪಂಚಾಯತ್ ವ್ಯಾಪ್ತಿಯ ಸೀಸೈ ಗ್ರಾಮದಲ್ಲಿ ಭಾರೀ ಮಳೆಯಿಂದ…
ಶಿಖರ್ ಬಿ.ಕೆ. 6ನೇ ತರಗತಿ, ಕುಮಾರಸ್ವಾಮಿ ವಿದ್ಯಾಲಯ, ಕುಕ್ಕೆಸುಬ್ರಹ್ಮಣ್ಯ | - ದ…
ಕ್ರಿಶನ್ ಎಸ್ ಭಟ್, ಮೇರಿ ಹಿಲ್, 1ನೇ ತರಗತಿ, ಎಸ್ಡಿಎಂ ಶಾಲೆ, ಮಂಗಳೂರು…
ಮುಂದಿನ 2 ರಿಂದ 3 ದಿನಗಳಲ್ಲಿ ದೇಶದ ಪೂರ್ವ, ಪಶ್ಚಿಮ, ಮಧ್ಯ ಮತ್ತು…