ಮಳೆಯೋ ಮಳೆ | ರಾತ್ರಿಯಿಂದಲೇ ಧೋ… ಸುರಿದ ಮಳೆ | ಕರಾವಳಿಯಲ್ಲಿ ಚಳಿ ಹಿಡಿಸಿದ ಮಳೆ | ನಾಳೆಯವರೆಗೆ ಮಳೆ ಭಯ |

July 18, 2021
7:31 AM

ಕಳೆದ ಎರಡು ದಿನಗಳಿಂದ ಮಳೆಯಬ್ಬರ ಹೆಚ್ಚಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಶನಿವಾರದಿಂದ ಮಳೆಯಾಗುತ್ತಿದೆ. ಅದರಲ್ಲೀ ಕರಾವಳಿ ಜಿಲ್ಲೆಗಳಲ್ಲಿ ಶನಿವಾರ ರಾತ್ರಿಯಿಂದ ಆರಂಭವಾದ ಮಳೆ ಧೋ…. ಸುರಿಯುತ್ತಲೇ ಇದೆ. ಕಳೆದ 24 ಗಂಟೆಗಳಲ್ಲಿ ಹಲವು ಕಡೆಗಳಲ್ಲಿ  100 ಮಿಮೀ ಗಿಂತಲೂ ಅಧಿಕ ಮಳೆಯಾಗಿದೆ. ಇನ್ನೂ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜೂನ್ 4 ರಂದು ಕೇರಳ ಪ್ರವೇಶಿಸಿದ್ದ ಮುಂಗಾರು ಜೂನ್ 19ರ ವೇಳೆಗೆ ಕ್ಷೀಣಿಸಿತ್ತು. ಜುಲೈ 8 ರಿಂದ ಮತ್ತೆ ಮುಂಗಾರು ಬಿರುಸು ಪಡೆದುಕೊಂಡಿತ್ತು. ಇದೀಗ ಕರಾವಳಿ ಜಿಲ್ಲೆಗಳಲ್ಲಿ  ಮಳೆ “ಚಳಿ” ಹಿಡಿಸಿದೆ. ಕೃಷಿಕರ ನಿದ್ದೆ ಕೆಡಿಸಲು ಆರಂಭಿಸಿದೆ. ಕೃಷಿ ಹಾನಿಯ ಬಗ್ಗೆ ಭಯ ಆರಂಭಗೊಂಡಿದೆ. ಸದ್ಯ ಕರಾವಳಿ ಜಿಲ್ಲೆಗಳಲ್ಲಿ  ರೆಡ್ ಎಲರ್ಟ್ ಘೋಷಣೆ ಇದ್ದು ಭಾನುವಾರವೂ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ. ಮುಂಬಯಿಯಿಂದ ತೊಡಗಿ ಇಡೀ ಕರಾವಳಿ ಜಿಲ್ಲೆಗಳಲ್ಲಿ  ರೆಡ್ ಎಲರ್ಟ್ ಇದೆ. ಜುಲೈ 19ರ ನಂತರ ಮಳೆ ಪ್ರಮಾಣ ಕಡಿಮೆಯಾಗಲಿದೆ. ಕರ್ನಾಟಕದಲ್ಲಿ ಜುಲೈ 21ರವರೆಗೂ  ಮಳೆಯಾಗಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!
April 5, 2026
1:27 PM
by: ಸಾಯಿಶೇಖರ್ ಕರಿಕಳ
ದೇಶಾದ್ಯಂತ 9.25 ಕೋಟಿ ರೈತ ಐಡಿ ನಿರ್ಮಾಣ | ರಸಗೊಬ್ಬರ ಬ್ಲಾಕ್‌ ಮಾರ್ಕೆಟ್‌ ವಿರುದ್ಧ ಕಟ್ಟುನಿಟ್ಟಾಗಿ ಕ್ರಮಕ್ಕೆ ಕೇಂದ್ರ ಕೃಷಿ ಸಚಿವರ ಸೂಚನೆ
April 4, 2026
7:34 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ
April 3, 2026
9:24 PM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!
April 3, 2026
4:02 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror