ಕಳೆದ ಎರಡು ದಿನಗಳಿಂದ ಮಳೆಯಬ್ಬರ ಹೆಚ್ಚಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಶನಿವಾರದಿಂದ ಮಳೆಯಾಗುತ್ತಿದೆ. ಅದರಲ್ಲೀ ಕರಾವಳಿ ಜಿಲ್ಲೆಗಳಲ್ಲಿ ಶನಿವಾರ ರಾತ್ರಿಯಿಂದ ಆರಂಭವಾದ ಮಳೆ ಧೋ…. ಸುರಿಯುತ್ತಲೇ ಇದೆ. ಕಳೆದ 24 ಗಂಟೆಗಳಲ್ಲಿ ಹಲವು ಕಡೆಗಳಲ್ಲಿ 100 ಮಿಮೀ ಗಿಂತಲೂ ಅಧಿಕ ಮಳೆಯಾಗಿದೆ. ಇನ್ನೂ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜೂನ್ 4 ರಂದು ಕೇರಳ ಪ್ರವೇಶಿಸಿದ್ದ ಮುಂಗಾರು ಜೂನ್ 19ರ ವೇಳೆಗೆ ಕ್ಷೀಣಿಸಿತ್ತು. ಜುಲೈ 8 ರಿಂದ ಮತ್ತೆ ಮುಂಗಾರು ಬಿರುಸು ಪಡೆದುಕೊಂಡಿತ್ತು. ಇದೀಗ ಕರಾವಳಿ ಜಿಲ್ಲೆಗಳಲ್ಲಿ ಮಳೆ “ಚಳಿ” ಹಿಡಿಸಿದೆ. ಕೃಷಿಕರ ನಿದ್ದೆ ಕೆಡಿಸಲು ಆರಂಭಿಸಿದೆ. ಕೃಷಿ ಹಾನಿಯ ಬಗ್ಗೆ ಭಯ ಆರಂಭಗೊಂಡಿದೆ. ಸದ್ಯ ಕರಾವಳಿ ಜಿಲ್ಲೆಗಳಲ್ಲಿ ರೆಡ್ ಎಲರ್ಟ್ ಘೋಷಣೆ ಇದ್ದು ಭಾನುವಾರವೂ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ. ಮುಂಬಯಿಯಿಂದ ತೊಡಗಿ ಇಡೀ ಕರಾವಳಿ ಜಿಲ್ಲೆಗಳಲ್ಲಿ ರೆಡ್ ಎಲರ್ಟ್ ಇದೆ. ಜುಲೈ 19ರ ನಂತರ ಮಳೆ ಪ್ರಮಾಣ ಕಡಿಮೆಯಾಗಲಿದೆ. ಕರ್ನಾಟಕದಲ್ಲಿ ಜುಲೈ 21ರವರೆಗೂ ಮಳೆಯಾಗಲಿದೆ.
ಕಡಲ ತೀರದ ಸ್ವಚ್ಛತೆಯ 100ನೇ ವಾರದ 'ಕ್ಲೀನ್ ಕಿನಾರ' ಕಾರ್ಯಕ್ರಮಕ್ಕೆ ಶಾಸಕ ಗುರುರಾಜ್…
ಗುಜ್ಜೆ ಚಟ್ನಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ: ಗುಜ್ಜೆ 3/4 ಕಪ್ ,ನೀರು…
2025ರಲ್ಲಿ ಮಂಗಳ ಗ್ರಹವು ವಿವಿಧ ನಕ್ಷತ್ರಗಳಲ್ಲಿ ಸಂಚಾರ ಮಾಡುವುದರಿಂದ ಕೆಲ ರಾಶಿಗಳಿಗೆ ವಿಶೇಷ…
ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವದ ಅಂಗವಾಗಿ ಮೂರು ದಿನಗಳ…
ಈಗಿನಂತೆ ಎಪ್ರಿಲ್ 29 ಹಾಗೂ 30 ರಂದು ಮಳೆ ಸ್ವಲ್ಪ ಕಡಿಮೆ ಇರುವ…
ಬೆಟ್ಟಗುಡ್ಡಗಳಲ್ಲಿ ಬೆಳೆಯಲಾಗುವ ಸೇಬನ್ನು ಕರ್ನಾಟಕದಲ್ಲಿಯೂ ಬೆಳೆಯಲಾಗುತ್ತಿದೆ ಎಂದು ಮನ್ ಕಿ ಬಾತ್ನಲ್ಲಿ ಪ್ರಧಾನಿ…