Advertisement
ವೆದರ್ ಮಿರರ್

ಹವಾಮಾನ ವರದಿ | 17-04-2025 | ಎ.20 ರಿಂದ ರಾಜ್ಯದ ವಿವಿದೆಡೆ ಮತ್ತೆ ಮಳೆ

Share

18.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸೆಖೆ ಸ್ವಲ್ಪ ಜಾಸ್ತಿಯೇ ಇರಲಿದೆ.
ಈಗಿನಂತೆ ಎಪ್ರಿಲ್ 20ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ಮಲೆನಾಡು : ಕೊಡಗು ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮೊಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.  ಈಗಿನಂತೆ ಕೊಡಗು ಜಿಲ್ಲೆಯಲ್ಲಿ ಮಳೆ ಮುಂದುವರಿಯಲಿದ್ದು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮೋಡದ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ. ಎಪ್ರಿಲ್ 19 ಅಥವಾ 20 ರಿಂದ ಮಳೆ ಆರಂಭವಾಗುವ ಸಾಧ್ಯತೆಗಳಿವೆ.

ಒಳನಾಡು : ಉತ್ತರ ಒಳನಾಡಿನ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ದಕ್ಷಿಣ ಒಳನಾಡಿನ ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ.
ಈಗಿನಂತೆ ಎಪ್ರಿಲ್ 20ರಿಂದ ದಕ್ಷಿಣ ಒಳನಾಡು ಹಾಗೂ 21 ರಿಂದ ಉತ್ತರ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಗಳಿವೆ.

2025ನೇ ಸಾಲಿನ ಭಾರತೀಯ ಹವಾಮಾನ ಇಲಾಖೆಯ ಮುಂಗಾರು ಪ್ರಥಮ ಸುತ್ತಿನ ( ಜೂನ್ – ಸೆಪ್ಟೆಂಬರ್ ) ವರದಿ ಪ್ರಕಟಿಸಲಾಗಿದ್ದು, ರಾಜ್ಯದಲ್ಲಿ ಸಾಮಾನ್ಯ ಮುಂಗಾರು ಇರುವ ಸಾಧ್ಯತೆಗಳನ್ನು ಹೇಳುತ್ತಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಬದುಕಿನ “ಬ್ಯಾಗೇಜ್‌” ಇಳಿಸುವ ಸಮಯ ಇದು

ಹಳೆಯ ನೋವು, ಕೋಪ, ತಿರಸ್ಕಾರ ಮತ್ತು ನಿರೀಕ್ಷೆಗಳ ಭಾರವನ್ನು ಹೊಸ ಸಂಬಂಧಗಳ ಮೇಲೆ…

2 hours ago

ರೈತರಿಗೆ ವಿದ್ಯುತ್‌ ಶಾಕ್ – ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್‌ ಕಡಿತ- ಪರ್ಯಾಯ ಶಕ್ತಿಯ ಬಗ್ಗೆ ಯೋಚಿಸಲು ಸಕಾಲ

ಮಳೆ ಕೊರತೆ ಮತ್ತು ಜಲವಿದ್ಯುತ್ ಉತ್ಪಾದನೆ ಕುಸಿತದ ಹಿನ್ನೆಲೆಯಲ್ಲಿ ಕೃಷಿ ಪಂಪ್‌ಸೆಟ್‌ಗಳಿಗೆ ನೀಡುತ್ತಿದ್ದ…

8 hours ago

ಅ.29 ರಿಂದ ನ.11 ರವರೆಗೆ ಹಾಸನಾಂಬ ಜಾತ್ರಾ ಮಹೋತ್ಸವ -12 ದಿನ ಸಾರ್ವಜನಿಕ ದರ್ಶನ

ವರ್ಷಕ್ಕೆ ಒಮ್ಮೆ ಮಾತ್ರ ದರ್ಶನ ನೀಡುವ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವ ಅಕ್ಟೋಬರ್…

9 hours ago

ಪಿಎಂ-ಕುಸುಮ್ ಯೋಜನೆಯಿಂದ ರೈತರ ನೀರಾವರಿಗೆ ಸೌರಶಕ್ತಿ

ಪಿಎಂ-ಕುಸುಮ್ ಯೋಜನೆಯಡಿ ರೈತರ ನೀರಾವರಿ ಪಂಪ್‌ಗಳಿಗೆ ಸೌರಶಕ್ತಿ ಅಳವಡಿಸುವ ಮೂಲಕ ಡೀಸೆಲ್ ಅವಲಂಬನೆ…

9 hours ago

ಡಬಲ್ ಡೆಕ್ಕರ್ ಸ್ಲೀಪರ್ ಬಸ್‌ಗೆ ಬೆಂಕಿ – ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಘಟನೆ

ಗ್ರೇಟರ್ ನೋಯ್ಡಾದ ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ಡಬಲ್ ಡೆಕ್ಕರ್ ಸ್ಲೀಪರ್ ಬಸ್‌ಗೆ ಬೆಂಕಿ ಹೊತ್ತಿಕೊಂಡು…

9 hours ago

531 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ – ಈಗಲೇ ಮಾಡಬೇಕಾದ ಮುಂಜಾಗ್ರತಾ ಕ್ರಮಗಳು ಏನು..?

ಕರ್ನಾಟಕದ 111 ತಾಲೂಕುಗಳ ವ್ಯಾಪ್ತಿಯ 531 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು,…

9 hours ago