ವಾಡಿಕೆಗಿಂತ ಮೊದಲೇ ರಾಜ್ಯಕ್ಕೆ ಮುಂಗಾರು ಪ್ರವೇಶ | ರಾಜ್ಯದ ಹಲವೆಡೆ ಜನಜೀವನ ಅಸ್ತವ್ಯಸ್ತ | ಈಗ ಎಲರ್ಟ್‌…ಎಲರ್ಟ್..!

May 26, 2025
2:57 PM
ಮುಂದಿನ 3 ಗಂಟೆಗಳಲ್ಲಿ ದಕ್ಷಿಣ ಕನ್ನಡ, ಗುಲ್ಬರ್ಗ, ಉಡುಪಿಯ ಕೆಲವು ಸ್ಥಳಗಳಲ್ಲಿ ಬಲವಾದ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಕರಾವಳಿಗೆ ಈ ಬಾರಿ ವಾಡಿಕೆಗಿಂತ ಮುನ್ನವೇ ಮುಂಗಾರು ಪ್ರವೇಶವಾಗಿದೆ. ಇಂದು ಬೆಳಗ್ಗಿನಿಂದಲೇ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಮಳೆಯ ಜೊತೆಗೆ ಭಾರೀ ಗಾಳಿಯ ಪರಿಣಾಮವಾಗಿ ಹಲವೆಡೆ ಮರಗಳು ಧರೆಗುರುಳಿವೆ. ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜಿಲ್ಲೆಯ ನೇತ್ರಾವತಿ, ಕುಮಾರಧಾರಾ, ಫಲ್ಗುಣಿ ನದಿಗಳು ತುಂಬಿ ಹರಿಯುತ್ತಿವೆ.  ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಇಂದು ಮುಂಜಾನೆಯಿಂದ ಧಾರಕಾರ ಮಳೆಯಾಗುತ್ತಿದು ಜನ ಜೀವನ ಬಾಧಿತಗೊಂಡಿದೆ. ಮಳೆಯಿಂದಾಗಿ ಹಲವೆಡೆ ಹಾನಿ ಸಂಭವಿಸಿದೆ. ಚಿಕ್ಕಮಗಳೂರು, ಮೂಡಿಗೆರೆ, ಕೊಟ್ಟಿಗೆಹಾರ, ಕೊಪ್ಪ, ಕಳಸ, ಹೊರನಾಡು, ಶೃಂಗೇರಿ, ಕಲ್ಲತಗಿರಿ ಸೇರಿದಂತೆ ಹಲವೆಡೆ ಹೆಚ್ಚಿನ ಮಳೆಯಾಗುತ್ತಿದೆ.  ಇದೀಗ ಮುಂದಿನ 3 ಗಂಟೆಗಳಲ್ಲಿ ದಕ್ಷಿಣ ಕನ್ನಡ, ಗುಲ್ಬರ್ಗ, ಉಡುಪಿಯ ಕೆಲವು ಸ್ಥಳಗಳಲ್ಲಿ ಬಲವಾದ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

Advertisement

ಶಿವಮೊಗ್ಗದಲ್ಲಿ ಜಲಾ ನಯನ ಪ್ರದೇಶದಲ್ಲಿ ರಾತ್ರಿಯಿಡೀ ಸುರಿದ ಮಳೆಗೆ ತುಂಗಾ ನದಿಗೆ ಕಟ್ಟಲಾದ ಗಾಜನೂರು ಜಲಾಶಯ ಭರ್ತಿಯಾಗಿದೆ.ಜಲಾಶಯ ಮುಂಗಾರು ಪೂರ್ವದಲ್ಲಿಯೇ ಭರ್ತಿಯಾಗಿದ್ದು,  3.71 ಟಿಎಂಸಿ ನೀರಿನ ಸಾಮರ್ಥ್ಯದ ಜಲಾಶಯಕ್ಕೆ 2000 ಕ್ಯೂಸೆಕ್ಸ್ ನೀರು ಹರಿದು ಬರುತ್ತಿದೆ.

ಭಾರೀ ಮಳೆಯ ಕಾರಣದಿಂದ  ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಎಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಧಾರವಾಡ ಜಿಲ್ಲೆಗಳಿಗೆ ಆರೆಂಜ್ ಎಲರ್ಟ್, ಮೈಸೂರು, ಮಂಡ್ಯ, ಹಾಸನ, ಚಾಮರಾಜನಗರ, ಹಾವೇರಿ, ಗದಗ ಜಿಲ್ಲೆಗಳಿಗೆ ಎಲ್ಲೋ ಎಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ವಿಜಯನಗರ, ಯಾದಗಿರಿ, ರಾಯಚೂರು, ಕೊಪ್ಪಳ, ಬೀದರ್‌ನಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

2047 ರ ವೇಳೆಗೆ ಕೇಂದ್ರ ಸರ್ಕಾರದಿಂದ 32 ಟ್ರಿಲಿಯನ್ ಡಾಲರ್ ಆರ್ಥಿಕತೆ ಗುರಿ
July 6, 2025
10:40 AM
by: ದ ರೂರಲ್ ಮಿರರ್.ಕಾಂ
ತುಂಗಾ, ಭದ್ರಾ ಜಲಾಶಯಗಳಿಂದ ಯಾವುದೇ ಕ್ಷಣದಲ್ಲಿ ನೀರು ಬಿಡುಗಡೆ ಸಾಧ್ಯತೆ | ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಸೂಚನೆ
July 6, 2025
10:34 AM
by: ದ ರೂರಲ್ ಮಿರರ್.ಕಾಂ
ವೇಗವಾಗಿ ಬೆಳೆಯುವ ಮರ ಹವಾಮಾನ ವೈಪರೀತ್ಯಕ್ಕೆ ಪರಿಹಾರ | ಕೃಷಿ ಅರಣ್ಯೀಕರಣಕ್ಕೆ ಬೆಂಬಲ – ಕೃಷಿ ಆದಾಯ ಹೆಚ್ಚಿಸಲೂ ಸಲಹೆ |
July 6, 2025
10:20 AM
by: ದ ರೂರಲ್ ಮಿರರ್.ಕಾಂ
ಜು.10 ರಿಂದ ರಾಘವೇಶ್ವರ ಶ್ರೀಗಳ ಸ್ವಭಾಷಾ ಚಾತುರ್ಮಾಸ್ಯ ಆರಂಭ
July 5, 2025
10:24 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group