ದೇಶದಲ್ಲಿ ದಿನದಿಂದ ದಿನಕ್ಕೆ ಹವಾಮಾನದಲ್ಲಿ ವೈಪರೀತ್ಯ(Climate change) ಕಂಡು ಬರುತ್ತಿದ್ದು, ದೇಶದ ಪೂರ್ವದಿಂದ ಉತ್ತರ ಮತ್ತು ದಕ್ಷಿಣದಿಂದ ಪಶ್ಚಿಮ ಭಾಗದವರೆಗೆ ಬಿಸಿ ಶಾಖದ(Heat wave) ಅನುಭವವಾಗುತ್ತಿದೆ. ಈ ನಡುವೆ ಕೆಲ ರಾಜ್ಯಗಳಲ್ಲಿ ಮಳೆಯ(Rain) ಮುನ್ಸೂಚನೆ ಸಿಕ್ಕಿದೆ. ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾ ಪ್ರದೇಶದಲ್ಲಿ ಏಪ್ರಿಲ್ 30 ರಿಂದ ಮೇ 2 ರವರೆಗೆ ಗುಡುಗು, ಮಿಂಚು ಮತ್ತು ಬಲವಾದ ಗಾಳಿಯೊಂದಿಗೆ ಭಾರೀ ಮಳೆ(Heavy rain) ಮತ್ತು ಹಿಮಪಾತ(Snowfall) ಉಂಟಾಗಬಹುದು ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.
ವಿದರ್ಭ, ಮರಾಠವಾಡ, ತೆಲಂಗಾಣ, ಛತ್ತೀಸ್‌ಗಢ ಮತ್ತು ದಕ್ಷಿಣ ಒಡಿಶಾದ ಕೆಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಪಂಜಾಬ್‌ನ ಉತ್ತರ ಭಾಗಗಳಲ್ಲಿ ಪ್ರತ್ಯೇಕವಾದ ಆಲಿಕಲ್ಲು ಮಳೆಯೊಂದಿಗೆ ಲಘುವಾಗಿ ಮಧ್ಯಮ ಮಳೆ ಮತ್ತು ಗುಡುಗು ಸಹಿತ ಮಳೆಯಾಗಬಹುದು. ಉತ್ತರ ಹರಿಯಾಣ ಮತ್ತು ವಾಯವ್ಯ ರಾಜಸ್ಥಾನದಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ. ಕೇರಳದಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಹರಿಯಾಣ ಮತ್ತು ವಾಯವ್ಯ ರಾಜಸ್ಥಾನದಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ. ಕೇರಳದಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ.
ದೇಶದ ಹಲವು ಭಾಗಗಳಲ್ಲಿ ಇಂದು ಅತ್ಯಂತ ಬಿಸಿಯ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಪೂರ್ವ ಭಾರತದಲ್ಲಿ ಮೇ 1 ರವರೆಗೆ ತೀವ್ರ ಶಾಖದ ಅಲೆಗಳು ಮುಂದುವರಿಯುವ ನಿರೀಕ್ಷೆಯಿದೆ. ಹವಾಮಾನ ಇಲಾಖೆಯ ಪ್ರಕಾರ, ಮುಂದಿನ 5 ದಿನಗಳಲ್ಲಿ ದಕ್ಷಿಣ ಭಾರತದಲ್ಲಿ ಶಾಖದ ಅಲೆಯ ಪರಿಸ್ಥಿತಿಗಳು ಮುಂದುವರಿಯುವ ಸಾಧ್ಯತೆಯಿದೆ.
ಅಡಿಕೆ ತೋಟಗಳಲ್ಲಿ ಹೂಗೊಂಚಲುಗಳು ಅರಳಿದರೂ ಕಾಯಿ ಕಟ್ಟದಿರುವುದಕ್ಕೆ ರೈತರು ಬಳಸುವ ಬೇವಿನ ಎಣ್ಣೆಯೇ…
ಕಳಪೆ ಗುಣಮಟ್ಟದ ಅಡಿಕೆ ಸಾಗಣೆ ಪ್ರಕರಣ ಪತ್ತೆಯಾಗಿದ್ದು, ಆಹಾರ ಸುರಕ್ಷತೆ ಮತ್ತು ಮಾನದಂಡಗಳ…
ಕಾಸರಗೋಡು CPCRI ತನ್ನ 110ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಜನರೇಷನ್ Z ಗಾಗಿ…
ಮಹಿಳಾ ಉದ್ಯಮಶೀಲತೆ, ತೆಂಗು ಮೌಲ್ಯವರ್ಧನೆ ಹಾಗೂ ರೈತರ ಆದಾಯ ವೃದ್ಧಿಯಲ್ಲಿ ತೆಂಗು ಅಭಿವೃದ್ಧಿ…
ತೆಂಗಿನಕಾಯಿ ಬೆಲೆ ಇಳಿಕೆ ಆತಂಕ ಹೆಚ್ಚಾಗಿದೆ. ಉತ್ಪಾದನೆ ಏರಿಕೆ ನಡುವೆಯೇ ರಫ್ತು ಮತ್ತು…
ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾನ್ ಅವರು…