ದೇಶದಾದ್ಯಂತ ವರುಣನ #Rain ಅಬ್ಬರ ಜೋರಾಗುತ್ತಿದೆ. ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುತ್ತಿದೆ. ಕರ್ನಾಟಕ #Karnataka, ತೆಲಂಗಾಣ #Telangana, ಆಂಧ್ರ ಪ್ರದೇಶ #Andra Pradesh ಮತ್ತು ಮಹಾರಾಷ್ಟ್ರ #Maharashtra ದಲ್ಲಿ ಸುರಿಯುತ್ತಿರುವ ಮಳೆಯಿಂದ ಜನರು ತತ್ತರಿಸಿ ಹೋಗಿದ್ದಾರೆ. ಈ ಮಧ್ಯೆ ಕೆಲ ಭಾಗದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ.
ಸದ್ಯದ ವರದಿ ಪ್ರಕಾರ ಇಂದು ತೆಲಂಗಾಣದ ಸಂಗಾರೆಡ್ಡಿ, ನಿರ್ಮಲ್, ನಿಜಾಮಾಬಾದ್ ವಾರಂಗಲ್, ಮೇದಕ್, ರಾಜಣ್ಣ ಸಿರಿಸಿಲ್ಲ ಭೂಪಾಲಪಲ್ಲಿ, ಖಮ್ಮಂ, ನಲ್ಗೊಂಡ, , ವಾರಂಗಲ್, ಮಹಬೂಬಾಬಾದ್, ಜನಗಾಂ, ಸಿದ್ದಿಪೇಟೆ, ಮುಲುಗು, ಸೂರ್ಯಪೇಟ್, ವಿಕಾರಾಬಾದ್, ಹನ್ಮಕೊಂಡ, ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಇನ್ನು ಕರ್ನಾಟಕ, ತೆಲಂಗಾಣ ಮತ್ತು ಮಹಾರಾಷ್ಟ್ರದ ಕೆಲವು ಜಿಲ್ಲೆಗಳ ಹಲವೆಡೆ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ ಎನ್ನಲಾಗಿದೆ. ಅದರ ಜೊತೆಗೆ ಗಂಟೆಗೆ ಗರಿಷ್ಠ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಲಿದೆ. ರಸ್ತೆಯಲ್ಲಿ ಸಂಚರಿಸುವ ದ್ವಿಚಕ್ರ ವಾಹನ ಸವಾರರು ಅತ್ಯಂತ ಜಾಗರೂಕರಾಗಿರಬೇಕು ಎಂದು ಸೂಚಿಲಾಗಿದೆ.
ಮಹಾರಾಷ್ಟ್ರ ಹಾಗೂ ಬೆಳಗಾವಿ ಜಿಲ್ಲೆಯ ಪಶ್ಚಿಮಘಟ್ಟ ಭಾಗದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕೃಷ್ಣಾ, ಮಲಪ್ರಭಾ, ಘಟಪ್ರಭಾ, ವೇದ ಗಂಗಾ, ದೂದ್ಗಂಗಾ, ಹಿರಣ್ಯಕೇಶಿ, ಮಹದಾಯಿ ಸೇರಿ ಬಹುತೇಕ ನದಿಗಳ ನೀರಿನಮಟ್ಟ ದಿಢೀರ್ ಏರಿಕೆಯಾಗಿದೆ. ಬಂಗಾಳಕೊಲ್ಲಿಯಲ್ಲಿ ಈಗಾಗಲೇ ಹವಾಮಾನ ವೈಪರೀತ್ಯ ಉಂಟಾಗಿದ್ದು, ನಾಳೆ ಮತ್ತೊಂದು ಸಣ್ಣಮಟ್ಟಿನ ವಾಯುಭಾರ ಕುಸಿತ ಉಂಟಾಗಲಿರುವುದರಿಂದ ಧಾರಾಕಾರ ಮಳೆಯಾಗಲಿದೆ ಎಂದು ಹೇಳಲಾಗುತ್ತದೆ. ಈಗಾಗಲೇ ತೆಲಂಗಾಣ, ಆಂಧ್ರ ಭಾಗದಲ್ಲಿ ಮೋಡ ಮುಸುಕಿದ ವಾತಾವರಣವಿದ್ದು, ಬೆಂಗಳೂರಿನಲ್ಲಿ ಕಡುಗತ್ತಲೆ ಉಂಟಾಗಿದೆ.
ಇನ್ನು ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ವಾಹನ ಸವಾರರಿಗೂ ತೊಡಕುಂಟಾಗಿದೆ. ಕಾರ್, ಆಟೋ ಚಾಲಕರು ಕೂಡ ರಸ್ತೆಯಲ್ಲಿ ಓಡಾಡಲು ಕಷ್ಟ ಪಡುತ್ತಿದ್ದಾರೆ. ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗಿದ್ದು, ಪಶ್ಚಿಮ ಘಟ್ಟದಲ್ಲಿ ವ್ಯಾಪಕ ಮಳೆಯಾದ ಪರಿಣಾಮ ಕರಾವಳಿಯ ನದಿಗಳು ಉಕ್ಕಿ ಹರಿಯುತ್ತಿವೆ. ನೇತ್ರಾವತಿ ಕುಮಾರಧಾರಾ ನದಿಗಳು ಅಪಾಯದ ಮಟ್ಟಕ್ಕೆ ತಲುಪುತ್ತಿವೆ.
ಶಿಖರ್ ಬಿ.ಕೆ. 6ನೇ ತರಗತಿ, ಕುಮಾರಸ್ವಾಮಿ ವಿದ್ಯಾಲಯ, ಕುಕ್ಕೆಸುಬ್ರಹ್ಮಣ್ಯ | - ದ…
ಕ್ರಿಶನ್ ಎಸ್ ಭಟ್, ಮೇರಿ ಹಿಲ್, 1ನೇ ತರಗತಿ, ಎಸ್ಡಿಎಂ ಶಾಲೆ, ಮಂಗಳೂರು…
ಮುಂದಿನ 2 ರಿಂದ 3 ದಿನಗಳಲ್ಲಿ ದೇಶದ ಪೂರ್ವ, ಪಶ್ಚಿಮ, ಮಧ್ಯ ಮತ್ತು…
ರೈತರು ಹೊಲಗಳಲ್ಲಿ ಬಳಕೆ ಮಾಡುತ್ತಿರುವ ರಸಗೊಬ್ಬರಗಳು ಅಸಲಿಯೇ ಅಥವಾ ನಕಲಿಯೇ ಎಂಬುದನ್ನು ವೈಜ್ಞಾನಿಕ…
ಕೃಷಿಯಲ್ಲಿ ತಂತ್ರಜ್ಞಾನ ಅಳವಡಿಸಿಕೊಳ್ಳುವ ಮತ್ತು ಜ್ಞಾನ ಹೆಚ್ಚಿಸುವ ಉದ್ದೇಶದಿಂದ ದೂರಶಿಕ್ಷಣದ ಮೂಲಕ ತರಬೇತಿ…
ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490