ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆ | ಕಬಿನಿ ಜಲಾಶಯದ ಒಳಹರಿವಿನಲ್ಲಿ ಏರಿಕೆ

May 31, 2025
9:12 PM

ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆ ಕಂಡುಬಂದಿದ್ದು, ಹೊರಹರಿವನ್ನು ಹೆಚ್ಚಳ ಮಾಡಲಾಗಿದೆ. ಜಲಾಶಯಕ್ಕೆ 18 ಸಾವಿರ ಕ್ಯೂಸೆಕ್ಸ್ ನೀರು ಹರಿದು ಬರುತ್ತಿದ್ದು, ಜಲಾಶಯದಿಂದ 9 ಸಾವಿರ ಕ್ಯೂಸೆಕ್ಸ್ ನೀರನ್ನು ಬಿಡುಗಡೆ ಮಾಡಲಾಗುತ್ತಿದೆ. ಜಲಾಶಯಕ್ಕೆ ಮತ್ತಷ್ಟು ಒಳಹರಿವು ಬರುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಸದ್ಯಕ್ಕೆ 9 ಸಾವಿರ ಕ್ಯೂಸೆಕ್ಸ್ ನೀರನ್ನು ಹೊರಗೆ ಬಿಡಲಾಗುತ್ತಿದೆ.

ಜಲಾಶಯದ ಗರಿಷ್ಠ ನೀರಿನ ಮಟ್ಟ 84 ಅಡಿಗಳಾಗಿದ್ದು, ಜಲಾಶಯದ ಇಂದಿನ ನೀರಿನ ಮಟ್ಟ 80.50 ಅಡಿಗಳಾಗಿದೆ. ರಾಜ್ಯದಲ್ಲಿಯೇ ಮೊದಲು ಭರ್ತಿ ಆಗುವ ಏಕೈಕ ಜಲಾಶಯ ಇದಾಗಿದ್ದು, ವರ್ಷದಲ್ಲಿ ಎರಡು ಬಾರಿ ಭರ್ತಿಯಾಗಲಿದೆ. ಇನ್ನು ಜಲಾಶಯದಿಂದ ಹೆಚ್ಚಿನ ನೀರನ್ನು ಹೊರಬಿಡಲಾಗಿರುವ ಹಿನ್ನೆಲೆಯಲ್ಲಿ ಕಪಿಲಾ ನದಿ ಪಾತ್ರದ ತಗ್ಗು ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರು ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಸೂಚನೆ ನೀಡಲಾಗಿದೆ. ಜಲಾಶಯದಿಂದ ಇನ್ನೂ ಹೆಚ್ಚಿನ ನೀರನ್ನು ಬಿಡುಗಡೆ ಮಾಡುವ ಸಾಧ್ಯತೆಯಿದ್ದು, ಜನರು ಮುನ್ನೆಚ್ಚರಿಕೆ ವಹಿಸುವಂತೆ ನೀರಾವರಿ ಇಲಾಖೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ವಿಶ್ವದ ಶೇ.79ರಷ್ಟು ನದಿಗಳಲ್ಲಿ ಆಮ್ಲಜನಕ ಕುಸಿತ- ಉಷ್ಣವಲಯದ ನದಿಗಳಿಗೆ ಹೆಚ್ಚು ಅಪಾಯ
September 23, 2026
9:41 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 23-09-2026 | ಸೆ.30 ರಿಂದ ಮತ್ತೆ ಬದಲಾಗಲಿದೆ ಹವಾಮಾನ..!
September 23, 2026
1:58 PM
by: ಸಾಯಿಶೇಖರ್ ಕರಿಕಳ
ಕರ್ನಾಟಕದಲ್ಲಿ ಮುಂದಿನ 4 ದಿನ ಭಾರೀ ಮಳೆ ಸಾಧ್ಯತೆ..! ಎಲ್ಲೆಲ್ಲಾ ರೆಡ್‌ ಎಲರ್ಟ್..?‌ ಯಾವಾಗ..?
September 23, 2026
9:18 AM
by: ದ ರೂರಲ್ ಮಿರರ್.ಕಾಂ
₹1.65 ಲಕ್ಷದ ಐಫೋನ್‌ಗಾಗಿ ಬೆಳಗ್ಗೆಯಿಂದಲೇ ಸರದಿ..! ಬೆಂಗಳೂರಿನಿಂದ ಮುಂಬೈವರೆಗೆ ಕಂಡ ‘ಐಫೋನ್‌ ಕ್ರೇಜ್’
September 22, 2026
8:02 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror