ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು ಸಹಿತ ಮಳೆಯಾಗಿದೆ. ಸಂಜೆ ವೇಳೆಗೆ ಧಾರಾಕಾರ ಮಳೆಯಾಯಿತು. ಸಿಡಿಲಿನ ಅಬ್ಬರಕೆ ಸುಬ್ರಹ್ಮಣ್ಯ ಬಳಿಯ ಹೊಸೋಳಿಕೆ ಎಂಬಲ್ಲಿ ಯುವಕ ಬಲಿಯಾಗಿದ್ದಾನೆ. ಇದೇ ವೇಳೆ ಕೊಡಗಿನಲ್ಲಿ ಕಾರ್ಮಿಕ ಗಾಯಗೊಂಡಿದ್ದಾನೆ. ಆಸ್ಪತ್ರೆಯಲ್ಲಿ ಕಾರ್ಮಿಕ ಮೃತಪಟ್ಟಿದ್ದಾರೆ.
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸಂಜೆ ಗುಡುಗು ಸಿಡಿಲು ಸಹಿತ ಮಳೆಯಾಗಿದೆ. ಸಿಡಿಲಿಗೆ ಹೊಸೋಳಿಕೆ ಬಳಿಯ ಪರ್ವತಮುಖಿಯ ಸೋಮಸುಂದರ ಎಂಬ ಯುವಕ ಬಲಿಯಾಗಿದ್ದಾರೆ.ಮಳೆ ಆರಂಭದ ವೇಳೆ ಅಂಗಳದಲ್ಲಿ ಅಡಿಕೆ ರಾಶಿ ಮಾಡುತ್ತಿದ್ದರು. ಈ ವೇಳೆ ಸಿಡಿಲು ಬಡಿದಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಇದೇ ವೇಳೆ ಮಡಿಕೇರಿ ಬಳಿಯ ಬೆಟ್ಟಗೇರಿಯಲ್ಲಿ ಸಿಡಿಲಿನ ಆಘಾತಕ್ಕೆ ಮನೆ ಬಳಿ ನಿಂತಿದ್ದ ಕಾರ್ಮಿಕ ಪ್ರಮಾತ್ ಗಾಯಗೊಂಡಿದ್ದಾರೆ. ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಸ್ಪತ್ರೆಯಲ್ಲಿ ಯುವಕ ಮೃತಪಟ್ಟಿದ್ದಾನೆ.
ಉದ್ಯೋಗದ ಪರೀಕ್ಷೆಗಳಿಗೂ ಧಾರ್ಮಿಕ ಸಂಕೇತಗಳಿಗೂ ಯಾಕೆ ಹೊಂದಿ ಬರುವುದಿಲ್ಲ? ಇದೊಂದು ಮಿಲಿಯನ್ ಡಾಲರ್…
ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾವಳಿ ಮೇ ತಿಂಗಳ 2 ರಿಂದ…
ವಿಶ್ವವಿಖ್ಯಾತ ಜೋಗ ಜಲಪಾತದಲ್ಲಿ ಪ್ರವಾಸಿಗರನ್ನು ಮತ್ತಷ್ಟು ಆಕರ್ಷಿಸುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವಿವಿಧ…
ಈಗಿನಂತೆ ಮೇ 1ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಹಾಗೂ ಮೇ 5ರಿಂದ ಉತ್ತರ…
ಮೇ 4 ರಂದು ದೇಶಾದ್ಯಂತ ನೀಟ್ ಯುಜಿ ಪರೀಕ್ಷೆ ನಡೆಯಲಿದೆ. ಮೈಸೂರು ಜಿಲ್ಲೆಯ…
ಸಾರ್ವಜನಿಕರು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರದ ವರುಣ ಮಿತ್ರ ಸಹಾಯವಾಣಿ 9243345433…