ಬಿಸಿಲಿನಿಂದ ಏರಿದ್ದ ತಾಪಮಾನದ ಕಾರಣದಿಂದ ವಿವಿದೆಡೆ ಮಳೆಯಾಗಿದೆ. ಅದರಲ್ಲೂ ಮಲೆನಾಡು ಪ್ರದೇಶಗಳಲ್ಲಿ ಉತ್ತಮ ಮಳೆಯಾಯಿತು. ಶಿರಸಿ, ಶಿವಮೊಗ್ಗ ಪ್ರದೇಶದಲ್ಲಿ ಶುಕ್ರವಾರ ಸಂಜೆ ಉತ್ತಮ ಮಳೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ವಿವಿದೆಡೆ, ಬೆಳ್ತಂಗಡಿ ತಾಲೂಕಿನ ವಿವಿದೆಡೆಯೂ ಮಳೆಯಾಯಿತು.
ಶಿರಸಿಯಲ್ಲಿ ಶುಕ್ರವಾರ ಮಧ್ಯಾಹ್ನ ನಂತರ ಸುರಿದ ಭಾರೀ ಮಳೆ ಹಾಗೂ ಗಾಳಿಗೆ ನಗರ ಪ್ರದೇಶ ಅಸ್ತವ್ಯಸ್ತವಾಯಿತು. ಶಿರಸಿಯ ಪ್ರಸಿದ್ಧ ಮಾರಿಕಾಂಬ ಜಾತ್ರೆಗೂ ತೊಂದರೆಯಾಯಿತು. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ, ಕೊಡಗಿನ ಚೆಂಬು ಪ್ರದೇಶದಲ್ಲಿ ಉತ್ತಮ ಮಳೆಯಾಗಿದೆ. ಉಳಿದಂತೆ ಸುಳ್ಯ ತಾಲೂಕಿನ ವಿವಿದೆಡೆ ಮಳೆಯಾಗಿದೆ. ಶಿವಮೊಗ್ಗ ಜಿಲ್ಲೆಯ ಹಲವು ಕಡೆಗಳಲ್ಲಿ ಉತ್ತಮ ಮಳೆಯಾಯಿತು.
#Rain at sirsi pic.twitter.com/0oK8YFKlpm
— theruralmirror (@ruralmirror) March 18, 2022
ಈ ನಡುವೆ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಕಾರಣದಿಂದ ಮುಂದಿನ ಎರಡು ದಿನಗಳ ಕಾಲ ಮಳೆಯಾಗುವ ಸೂಚನೆ ಇದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ವಾಯುಭಾರ ಕುಸಿತದ ಕಾರಣದಿಂದ ಅಸನಿ ಚಂಡಮಾರುತ ಕಂಡುಬರಲಿದ್ದು ಕರಾವಳಿ ತೀರ ಅಂದರೆ ಅಂಡಮಾನ್ ನಿಕೋಬಾರ್ ದ್ವೀಪಗಳ ತೀರದಲ್ಲಿ ಎಲರ್ಟ್ ಘೋಷಿಸಲಾಗಿದೆ. ಭಾರತದಲ್ಲೂ ಅಸನಿ ಪ್ರಭಾವ ಕಾಣಲಿದೆ.
ಈ ನಡುವೆ ದಿನದಿಂದ ದಿನಕ್ಕೆ ದೇಶದೆಲ್ಲೆಡೆ ತಾಪಮಾನ ಹೆಚ್ಚಾಗುತ್ತಿದೆ. ರಾಷ್ಟ್ರ ರಾಜಧಾನಿಯಲ್ಲಿ 36 ಡಿಗ್ರಿ ಸೆಲ್ಸಿಯಸ್ ತಾಪಮಾನ ದೆಹಲಿಯಲ್ಲಿ ದಾಖಲಾಗಿದೆ. ರಾಜ್ಯದಲ್ಲೂ 35 ಡಿಗ್ರಿಗಿಂತ ಅಧಿಕ ಉಷ್ಣಾಂಶ ದಾಖಲಾಗಿದೆ.