Advertisement
ಸುದ್ದಿಗಳು

ಶಿರಸಿ, ಶಿವಮೊಗ್ಗದಲ್ಲೂ ಉತ್ತಮ ಮಳೆ | ಇನ್ನೂ ಎರಡು ದಿನ ಮಳೆ ಮುನ್ಸೂಚನೆ |

Share

ಬಿಸಿಲಿನಿಂದ ಏರಿದ್ದ ತಾಪಮಾನದ ಕಾರಣದಿಂದ ವಿವಿದೆಡೆ ಮಳೆಯಾಗಿದೆ. ಅದರಲ್ಲೂ ಮಲೆನಾಡು ಪ್ರದೇಶಗಳಲ್ಲಿ ಉತ್ತಮ ಮಳೆಯಾಯಿತು. ಶಿರಸಿ, ಶಿವಮೊಗ್ಗ ಪ್ರದೇಶದಲ್ಲಿ ಶುಕ್ರವಾರ ಸಂಜೆ ಉತ್ತಮ ಮಳೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ವಿವಿದೆಡೆ, ಬೆಳ್ತಂಗಡಿ ತಾಲೂಕಿನ ವಿವಿದೆಡೆಯೂ ಮಳೆಯಾಯಿತು.

ಶಿರಸಿಯಲ್ಲಿ ಶುಕ್ರವಾರ ಮಧ್ಯಾಹ್ನ ನಂತರ ಸುರಿದ ಭಾರೀ ಮಳೆ ಹಾಗೂ ಗಾಳಿಗೆ ನಗರ ಪ್ರದೇಶ ಅಸ್ತವ್ಯಸ್ತವಾಯಿತು. ಶಿರಸಿಯ ಪ್ರಸಿದ್ಧ ಮಾರಿಕಾಂಬ ಜಾತ್ರೆಗೂ ತೊಂದರೆಯಾಯಿತು. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ, ಕೊಡಗಿನ ಚೆಂಬು ಪ್ರದೇಶದಲ್ಲಿ ಉತ್ತಮ ಮಳೆಯಾಗಿದೆ. ಉಳಿದಂತೆ ಸುಳ್ಯ ತಾಲೂಕಿನ ವಿವಿದೆಡೆ ಮಳೆಯಾಗಿದೆ. ಶಿವಮೊಗ್ಗ ಜಿಲ್ಲೆಯ ಹಲವು ಕಡೆಗಳಲ್ಲಿ ಉತ್ತಮ ಮಳೆಯಾಯಿತು.

ಈ ನಡುವೆ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಕಾರಣದಿಂದ ಮುಂದಿನ ಎರಡು ದಿನಗಳ ಕಾಲ ಮಳೆಯಾಗುವ ಸೂಚನೆ ಇದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ವಾಯುಭಾರ ಕುಸಿತದ ಕಾರಣದಿಂದ ಅಸನಿ ಚಂಡಮಾರುತ ಕಂಡುಬರಲಿದ್ದು  ಕರಾವಳಿ ತೀರ ಅಂದರೆ ಅಂಡಮಾನ್‌ ನಿಕೋಬಾರ್‌ ದ್ವೀಪಗಳ ತೀರದಲ್ಲಿ ಎಲರ್ಟ್‌ ಘೋಷಿಸಲಾಗಿದೆ. ಭಾರತದಲ್ಲೂ ಅಸನಿ ಪ್ರಭಾವ ಕಾಣಲಿದೆ.

ಈ ನಡುವೆ ದಿನದಿಂದ ದಿನಕ್ಕೆ ದೇಶದೆಲ್ಲೆಡೆ ತಾಪಮಾನ ಹೆಚ್ಚಾಗುತ್ತಿದೆ. ರಾಷ್ಟ್ರ ರಾಜಧಾನಿಯಲ್ಲಿ  36  ಡಿಗ್ರಿ ಸೆಲ್ಸಿಯಸ್‌ ತಾಪಮಾನ ದೆಹಲಿಯಲ್ಲಿ ದಾಖಲಾಗಿದೆ. ರಾಜ್ಯದಲ್ಲೂ 35 ಡಿಗ್ರಿಗಿಂತ ಅಧಿಕ ಉಷ್ಣಾಂಶ ದಾಖಲಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

1973 ರ ಅಡಿಕೆ ಬಿಕ್ಕಟ್ಟು 2026ಕ್ಕೆ ನೀಡುವ ಎಚ್ಚರಿಕೆ ಏನು..?

1973ರ ಅಡಿಕೆ ಮಾರುಕಟ್ಟೆ ಬಿಕ್ಕಟ್ಟು ಉತ್ಪಾದನೆ ಹೆಚ್ಚಳಕ್ಕೆ ತಕ್ಕಂತೆ ಮಾರುಕಟ್ಟೆ ಹೀರಿಕೊಳ್ಳುವ ಸಾಮರ್ಥ್ಯವೂ…

5 hours ago

ಹವಾಮಾನ ವರದಿ | 05-10-2026 | ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿಯಿಂದ ಮಳೆ – ಅ.6 ರ ಬಳಿಕ ಏನಾಗಲಿದೆ?

ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ,…

13 hours ago

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?

ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…

2 days ago

ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು

ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…

2 days ago

ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ

ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…

2 days ago

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…

2 days ago