ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆ ಹಾಗೂ ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ನಿರಂತರ ಮಳೆಯಿಂದಾಗಿ ಬೆಳಗಾವಿ ತಾಲೂಕು ಸೇರಿದಂತೆ ಖಾನಾಪುರ, ಚಿಕ್ಕೋಡಿ ಭಾಗದ ಜನಜೀವನ ಅಸ್ತವ್ಯಸ್ತಗೊಂಡಿದೆ. ಮಲಪ್ರಭ ನದಿ ಸೇರುವ ಖಾನಾಪುರ, ಗೋವಾ ರಾಜ್ಯ ಹೆದ್ದಾರಿ ಮಾರ್ಗದ ಹಾಲಾತ್ರಿ ಹಳ್ಳ ತುಂಬಿ ಹರಿಯುತ್ತಿದ್ದು, ನೆರಸೆ, ಮಂತುರ್ಗ, ಅಶೋಕ ನಗರ, ಗವಳಿವಾಡ, ಹೆಮ್ಮಡಗ ಸೇರಿದಂತೆ 15ಕ್ಕೂ ಅಧಿಕ ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ. ಮಳೆಯಿಂದಾಗಿ ಕುಸುಮನಾಳ ಸೇತುವೆ ಕುಸಿದ ಪರಿಣಾಮ, ಜಾಂಬೋಟಿ ಮಾರ್ಗದ ಗೋವಾ ಸಾರಿಗೆ ಸಂಪರ್ಕ ಕಳೆದ ಒಂದು ವಾರದಿಂದ ಸ್ಥಗಿತಗೊಂಡಿದೆ.
ಖಾನಾಪುರ ತಾಲೂಕಿನಾದ್ಯಂತ ಮುಂಗಾರು ಬಿತ್ತನೆ ಮಾಡಿದ್ದ ಭತ್ತದ ಬೆಳೆಯಲ್ಲಿ ನೀರು ತುಂಬಿದ್ದು, ಸಾವಿರಾರು ಎಕರೆ ಹೆಕ್ಟೇರ್ ಪ್ರದೇಶ ಜಲಾವೃತವಾಗಿದೆ. ಬೆಳಗಾವಿ ತಾಲೂಕಿನಲ್ಲೂ ವಿಪರೀತ ಮಳೆಯಿಂದಾಗಿ ಕಂಗ್ರಾಳಿ ಖುರ್ದಾ ಗ್ರಾಮದ ಕಾಳಕಟ್ಟಾ ನಾಲೆ ಒಡೆದು 200ಕ್ಕೂ ಹೆಚ್ಚು ಜನರು ಸಂಕಷ್ಟಕ್ಕೆ ಸಿಲುಕಿದ್ದು ಅವರನ್ನು ಸುರಕ್ಷಿತ ಸ್ಥಳಗಳಿಗೆ ಕರೆತರಲಾಗಿದೆ. ಕೃಷ್ಣಾನದಿ ಸೇರಿದಂತೆ ಅದರ ಉಪ ನದಿಗಳಾದ ಮಲಪ್ರಭ, ಘಟಪ್ರಭ, ವೇದಗಂಗಾ, ದೂದಗಂಗಾ, ಪಂಚಗಂಗಾ, ಹಿರಣ್ಯಕೇಶಿ, ಮಾರ್ಕಂಡೇಯ ನದಿಗಳು ತುಂಬಿ ಹರಿಯುತ್ತಿದ್ದು, ಇದರ ಪರಿಣಾಮ ಚಿಕ್ಕೋಡಿ ವಿಭಾಗದ 11 ಕೆಳ ಹಂತದ ಸೇತುವೆಗಳು ಜಲಾವೃತಗೊಂಡಿವೆ. ಸುಮಾರು 22 ಹಳ್ಳಿಗಳು ಸಂಪರ್ಕ ಕಳೆದುಕೊಂಡಿವೆ.
ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿದಂತೆ ಆಕ್ಸಿಯಮ್-4 ಮಿಷನ್‌ನ ನಾಲ್ವರು ಗಗನಯಾತ್ರಿಗಳನ್ನು ಒಳಗೊಂಡ…
ರಾಜ್ಯದಿಂದಲೇ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ಮಂತ್ರಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಸತಿ…
ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು…
ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದ…
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೇಘಾಲಯಕ್ಕೆ ಭೇಟಿ ನೀಡಿದ ಸಂದರ್ಭ ಹಲಸಿನ…
ವ್ಯಾಪಾರದ ಯಶಸ್ಸು ಒಂದು ಕಾಲದಿಂದ ಇನ್ನೊಂದು ಕಾಲಕ್ಕೆ ಬದಲಾಗುತ್ತದೆ, ಮತ್ತು ಜ್ಯೋತಿಷ್ಯ ಶಾಸ್ತ್ರದ…