ಮಳೆಗೆ ವಿವಿದೆಡೆ ಬೆಳೆ ಹಾನಿ | ಬೆಳೆ ಹಾನಿ ಕುರಿತು ವರದಿ ಸಲ್ಲಿಸುವಂತೆ ಸೂಚನೆ

August 25, 2025
8:25 PM

ಬೀದರ್ ಜಿಲ್ಲೆಯಲ್ಲಿ ಇತ್ತೀಚಿಗೆ ಸುರಿದ  ಮಳೆಯಿಂದ ಹಾನಿಗಿಡಾದ ಪ್ರದೇಶಗಳಿಗೆ  ಹಜ್ ಮತ್ತು ಪೌರಾಡಳಿತ ಸಚಿವ ರಹೀಂ ಖಾನ್ ನಿನ್ನೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.  ಈ ವೇಳೆ  ಬೆಳೆ ಹಾನಿ ಕುರಿತು  ಸಮೀಕ್ಷೆ ನಡೆಸಿ, ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.

ಈ ಸಂದರ್ಭದಲ್ಲಿ  ಬೀದರ ಸಹಾಯಕ ಆಯುಕ್ತ ಮೊಹಮದ್ ಶಕೀಲ್, ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ದೇವಿಕಾ, ಬೀದರ ತಹಸಿಲ್ದಾರ್ ರವೀಂದ್ರಧಾಮಾ, ಕೃಷಿ ಇಲಾಖೆ ಉಪ ನಿರ್ದೇಶಕ ಇಕ್ಬಾಲ್‍ ಅನ್ಸಾರಿ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಸಚಿವ ರಹೀಂ ಖಾನ್,  ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆಯಾಗಿ ಅನೇಕ ಕಡೆ ತೀವ್ರ ಹಾನಿಯಾಗಿದೆ. ಮನೆಗಳು ಕುಸಿದಿವೆ, ರೈತರ ಹೊಲದಲ್ಲಿನ ಬೆಳೆಗಳು ನಾಶವಾಗಿವೆ. ಬೆಳೆಗಳಾದ ಹೆಸರು, ಉದ್ದುಬೆಳೆಗಳು ಅತೀ ಹೆಚ್ಚು ಹಾನಿಗೆ ಒಳಗಾಗಿವೆ. ಅಧಿವೇಶನದ ವೇಳೆಯಲ್ಲಿಯೇ ತಾವು ಹಾಗೂ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಕಂದಾಯ, ಕೃಷಿ ಸಚಿವರ ಗಮನಕ್ಕೆ ತಂದಿದ್ದೇವೆ. ಈ ವಿಷಯವು ಸದನದಲ್ಲಿ ಕೂಡ ಚರ್ಚೆಆಗಿದೆ. ಹಾನಿಯ ಸಮೀಕ್ಷೆ ನಡೆಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು. ಹಾನಿಯಿಂದಾಗಿ  ಸಂಕಷ್ಟದಲ್ಲಿರುವವರಿಗೆ ಸರ್ಕಾರದಿಂದ ತತ್‍ಕ್ಷಣ ಪರಿಹಾರವನ್ನು ನೀಡಲಾಗುತ್ತಿದೆ,  ಹಾನಿಗೀಡಾದ ಮನೆಗಳಿಗೆ ತಕ್ಷಣ 7 ರಿಂದ 10 ಸಾವಿರ ನೀಡಲಾಗುತ್ತಿದೆ. ನಂತರ ಸರ್ವೆಕೈಗೊಂಡು ಪೂರ್ಣ ಪರಿಹಾರ ನೀಡಲಾಗುವುದು. 100 ರಿಂದ 200 ಕೋಟಿ ಪರಿಹಾರ ನೀಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದೆ ಎಂದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ….

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನಲ್ಲಿ ನಿರಂತರ ಮಳೆಯಿಂದಾಗಿ ಬೆಳೆ ಹಾನಿಯಾಗಿದ್ದು, ಆ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ನಿನ್ನೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಶಾಸಕ ಎನ್.ಎಚ್.ಕೋನರೆಡ್ಡಿ, ಜಿಲ್ಲಾಧಿಕಾರಿ ದಿವ್ಯಾ ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಸೇರಿದಂತೆ ಮತ್ತಿತತರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್
October 17, 2026
7:30 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ
October 17, 2026
7:23 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ
October 16, 2026
5:14 PM
by: ವಿಶೇಷ ಪ್ರತಿನಿಧಿ
ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ
October 16, 2026
3:42 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror