ಬೀದರ್ ಜಿಲ್ಲೆಯಲ್ಲಿ ಇತ್ತೀಚಿಗೆ ಸುರಿದ ಮಳೆಯಿಂದ ಹಾನಿಗಿಡಾದ ಪ್ರದೇಶಗಳಿಗೆ ಹಜ್ ಮತ್ತು ಪೌರಾಡಳಿತ ಸಚಿವ ರಹೀಂ ಖಾನ್ ನಿನ್ನೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಈ ವೇಳೆ ಬೆಳೆ ಹಾನಿ ಕುರಿತು ಸಮೀಕ್ಷೆ ನಡೆಸಿ, ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.
ಈ ಸಂದರ್ಭದಲ್ಲಿ ಬೀದರ ಸಹಾಯಕ ಆಯುಕ್ತ ಮೊಹಮದ್ ಶಕೀಲ್, ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ದೇವಿಕಾ, ಬೀದರ ತಹಸಿಲ್ದಾರ್ ರವೀಂದ್ರಧಾಮಾ, ಕೃಷಿ ಇಲಾಖೆ ಉಪ ನಿರ್ದೇಶಕ ಇಕ್ಬಾಲ್ ಅನ್ಸಾರಿ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಸಚಿವ ರಹೀಂ ಖಾನ್, ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆಯಾಗಿ ಅನೇಕ ಕಡೆ ತೀವ್ರ ಹಾನಿಯಾಗಿದೆ. ಮನೆಗಳು ಕುಸಿದಿವೆ, ರೈತರ ಹೊಲದಲ್ಲಿನ ಬೆಳೆಗಳು ನಾಶವಾಗಿವೆ. ಬೆಳೆಗಳಾದ ಹೆಸರು, ಉದ್ದುಬೆಳೆಗಳು ಅತೀ ಹೆಚ್ಚು ಹಾನಿಗೆ ಒಳಗಾಗಿವೆ. ಅಧಿವೇಶನದ ವೇಳೆಯಲ್ಲಿಯೇ ತಾವು ಹಾಗೂ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಕಂದಾಯ, ಕೃಷಿ ಸಚಿವರ ಗಮನಕ್ಕೆ ತಂದಿದ್ದೇವೆ. ಈ ವಿಷಯವು ಸದನದಲ್ಲಿ ಕೂಡ ಚರ್ಚೆಆಗಿದೆ. ಹಾನಿಯ ಸಮೀಕ್ಷೆ ನಡೆಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು. ಹಾನಿಯಿಂದಾಗಿ ಸಂಕಷ್ಟದಲ್ಲಿರುವವರಿಗೆ ಸರ್ಕಾರದಿಂದ ತತ್‍ಕ್ಷಣ ಪರಿಹಾರವನ್ನು ನೀಡಲಾಗುತ್ತಿದೆ, ಹಾನಿಗೀಡಾದ ಮನೆಗಳಿಗೆ ತಕ್ಷಣ 7 ರಿಂದ 10 ಸಾವಿರ ನೀಡಲಾಗುತ್ತಿದೆ. ನಂತರ ಸರ್ವೆಕೈಗೊಂಡು ಪೂರ್ಣ ಪರಿಹಾರ ನೀಡಲಾಗುವುದು. 100 ರಿಂದ 200 ಕೋಟಿ ಪರಿಹಾರ ನೀಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದೆ ಎಂದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ ಸೇರಿಕೊಳ್ಳಿ….
ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನಲ್ಲಿ ನಿರಂತರ ಮಳೆಯಿಂದಾಗಿ ಬೆಳೆ ಹಾನಿಯಾಗಿದ್ದು, ಆ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ನಿನ್ನೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಶಾಸಕ ಎನ್.ಎಚ್.ಕೋನರೆಡ್ಡಿ, ಜಿಲ್ಲಾಧಿಕಾರಿ ದಿವ್ಯಾ ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಸೇರಿದಂತೆ ಮತ್ತಿತತರು ಉಪಸ್ಥಿತರಿದ್ದರು.
ಡಾರ್ಜಿಲಿಂಗ್–ಸಿಕ್ಕಿಂ ಹಿಮಾಲಯಗಳಲ್ಲಿ ಮಾರುಕಟ್ಟೆ ಸಂಪರ್ಕದ ಕೊರತೆಯಿಂದ ಕೃಷಿ ಆದಾಯ ಕುಸಿತವಾಗಿದೆ. ಕಳಪೆ ರಸ್ತೆ,…
12.01.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಬರ ಪ್ರದೇಶ ಕೃಷಿಗೆ ಹೊಸ ದಾರಿ ತೆರೆದಿರುವ ICAR–ಒಂಟೆ ಸಂಶೋಧನಾ ಕೇಂದ್ರದ ಅಧ್ಯಯನವು,…
ರಾಜಸ್ಥಾನದ ಹನುಮಂಗಢ ಜಿಲ್ಲೆಯಲ್ಲಿ ಇಬ್ಬರು ಗ್ರಾಮೀಣ ಉದ್ಯಮಿಗಳು ಆರಂಭಿಸಿದ ಗ್ರೀನ್ ವಿಷನ್ ವರ್ಮಿಕಾಂಪೋಸ್ಟ್…
ಚೀನಾದ Chinese Academy of Tropical Agricultural Sciences (CATAS) ವಿಜ್ಞಾನಿಗಳು Electron…
ಕೃಷಿ ಭೂಮಿಯ ಲಭ್ಯತೆ ಕಡಿಮೆಯಾಗಿ ಸಂಕಷ್ಟದಲ್ಲಿರುವ ರೈತರಿಗಾಗಿ ಸರ್ಕಾರವು ಅರಣ್ಯ ಭೂಮಿಯನ್ನು ಕೃಷಿ…