ಅಡಿಕೆ ಬೆಳೆಗೆ ಕೊಳೆರೋಗ | ಎಲೆಚುಕ್ಕಿ ರೋಗ ಸಾಧ್ಯತೆ | ಮುನ್ನೆಚ್ಚರಿಕಾ ಕ್ರಮಗಳಿಗೆ ಇಲಾಖೆ ಸೂಚನೆ |

July 21, 2025
9:37 PM

ಜುಲೈ ತಿಂಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತಿರುವುದರಿಂದ, ಜಿಲ್ಲೆಯ ಹಲವೆಡೆ ಅಡಿಕೆಯಲ್ಲಿ ಕೊಳೆರೋಗ ಕಾಣಿಸಿಕೊಂಡಿರುವುದು ತೋಟಗಾರಿಕೆ ಇಲಾಖೆಯ ಗಮನಕ್ಕೆ ಬಂದಿರುತ್ತದೆ. ಅಲ್ಲದೇ ಮಳೆ ಇದೇ ರೀತಿ ಮುಂದುವರೆದರೆ ಆಗಸ್ಟ್ ತಿಂಗಳ ನಂತರ ಅಡಿಕೆ ಎಲೆ ಚುಕ್ಕೆ ರೋಗ ವ್ಯಾಪಕವಾಗಿ ಹರಡುವ ಸಾಧ್ಯತೆಯಿರುವ ಕಾರಣ ರೈತರು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ತಿಳಿಸಲಾಗಿದೆ.

ಅಡಿಕೆ ಬೆಳೆಯಲ್ಲಿ ಸಮಗ್ರ ಪೋಷಕಾಂಶ/ಕೀಟ/ರೋಗ ನಿರ್ವಹಣೆ ಸಂಬಂಧ ಗೊಬ್ಬರ/ಸೂಕ್ಷ್ಮ ಪೋಷಕಾಂಶ/ ಕೀಟನಾಶಕ/ ಶಿಲೀಂಧ್ರನಾಶಕಗಳನ್ನು ಖರೀದಿಸುವ ರೈತರಿಗೆ ಸಮಗ್ರ ತೋಟಗಾರಿಕೆ ಅಭಿವೃದ್ಧಿ ಮಿಷನ್ ಯೋಜನೆಯ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಉಪಯೋಜನೆಯಡಿ ನವೀನ ತಂತ್ರಜ್ಞಾನಗಳು ಕಾರ್ಯಕ್ರಮದಡಿ ಸಹಾಯಧನ ಸೌಲಭ್ಯ ಲಭ್ಯವಿರುತ್ತದೆ. ರೈತರು ಯೋಜನೆಯ ಸದುಪಯೋಗ ಪಡೆದುಕೊಳ್ಳಬಹುದು ಎಂದು ಇಲಾಖೆ ತಿಳಿಸಿದೆ.

ಹೆಚ್ಚಿನ ಮಾಹಿತಿಗೆ ದ.ಕ ತೋಟಗಾರಿಕೆ ಉಪನಿರ್ದೇಶಕ ಮಂಜುನಾಥ ಡಿ- 9448999226, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಪ್ರವೀಣ ಕೆ- 9449258204, ಬಂಟ್ವಾಳ  ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಜೋ ಪ್ರದೀಪ್ ಡಿಸೋಜ, – 9448206393, ಪುತ್ತೂರು  ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕಿ ರೇಖಾ ಎ- 9731854527,    ಸುಳ್ಯ  ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಪ್ರಮೋದ ಸಿ.ಎಮ್ – 9880993238, ಬೆಳ್ತಂಗಡಿ        ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಚಂದ್ರಶೇಖರ ಕೆ.ಎಸ್.- 9448336863 ಸಂಪರ್ಕಿಸಬಹುದು ಎಂದು  ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Rain poses significant challenges to arecanut farming, primarily due to its susceptibility to diseases such as Koleroga and leaf spot. Excessive rainfall creates humid conditions that are ideal for the proliferation of the fungal pathogens responsible for these diseases. Koleroga, also known as the “foot rot” disease, can severely affect the tender arecanut and substantial yield losses. Similarly, leaf spot disease damages the foliage, reducing the plant’s ability to photosynthesize effectively, which in turn impacts overall crop health and productivity.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

2025-26 ರಲ್ಲಿ ಅಡಿಕೆ ಕೊಳೆರೋಗ ಮತ್ತು ಎಲೆಚುಕ್ಕಿ ರೋಗ ಪ್ರಕರಣ ವರದಿಯಾಗಿಲ್ಲ…!
December 17, 2025
7:54 AM
by: ದ ರೂರಲ್ ಮಿರರ್.ಕಾಂ
ಮನೆಯ ಮೇಲ್ಛಾವಣಿಯನ್ನು ಕೃಷಿ ಭೂಮಿಯನ್ನಾಗಿಸಿದ ಆಸಿಯಾ ಇತರ ಮಹಿಳೆಯರಿಗೂ ಇಂದು ಮಾದರಿ..
December 17, 2025
7:17 AM
by: ರೂರಲ್‌ ಮಿರರ್ ಸುದ್ದಿಜಾಲ
ನಮ್ಮ ಹೊಲ ನಮ್ಮ ದಾರಿ : ರಸ್ತೆಗೆ 12.5 ಲಕ್ಷ ಸಹಾಯಧನ
December 17, 2025
7:06 AM
by: ರೂರಲ್‌ ಮಿರರ್ ಸುದ್ದಿಜಾಲ
2025-26 ನೇ ಸಾಲಿನ ಕೃಷಿ ಇಲಾಖೆ ಸಹಾಯಧನ ಯೋಜನೆಗಳು
December 17, 2025
7:02 AM
by: ರೂರಲ್‌ ಮಿರರ್ ಸುದ್ದಿಜಾಲ

You cannot copy content of this page - Copyright -The Rural Mirror