ರಾಜ್ಯಾದ್ಯಂತ ಭಾರೀ ಮಳೆ  ಹಿನ್ನೆಲೆ | ಜಿಲ್ಲಾ ಸಚಿವರು,ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಆದೇಶ

May 29, 2025
7:40 AM

ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಬಾಧಿತ ಪ್ರದೇಶಗಳಿಗೆ ತೆರಳಿ ಪರಿಹಾರ ಕಾರ್ಯದ ಉಸ್ತುವಾರಿ ನೋಡಿಕೊಳ್ಳುವಂತೆ ಜಿಲ್ಲಾ  ಉಸ್ತುವಾರಿ ಸಚಿವರು ಹಾಗೂ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ  ಸೂಚನೆ ನೀಡಿದ್ದಾರೆ.

ಮಳೆಯಿಂದ ಆಗಿರುವ ಅನಾಹುತದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದ ಮುಖ್ಯಮಂತ್ರಿ, ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಆದೇಶಿಸಿದರು. ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು,  ಕಟ್ಟೆಚ್ಚರ ಮತ್ತು ತೀವ್ರ ನಿಗಾ ವಹಿಸಿ ತಕ್ಷಣ ಪರಿಹಾರ ಕಾರ್ಯಗಳನ್ನು ಸಮರೋಪಾದಿಯಲ್ಲಿ ನಿರ್ವಹಿಸಲು ಸೂಚನೆ ನೀಡಿದ್ದಾರೆ.

ಈ ಬಗ್ಗೆ ಸಮಗ್ರ ಅವಲೋಕನ‌ ನಡೆಸಲು , ಇದೇ  30, 31 ರಂದು   ಜಿಲ್ಲಾಧಿಕಾರಿ , ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು  ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸಭೆ ಕರೆಯುವಂತೆ ಮುಖ್ಯಮಂತ್ರಿಗಳು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದಾರೆ.  ರಾಜ್ಯದಲ್ಲಿ 170 ತಾಲ್ಲೂಕುಗಳನ್ನು ಪ್ರವಾಹ, ಭೂಕುಸಿತಕ್ಕೆ ಗುರಿಯಾಗುವ ತಾಲ್ಲೂಕುಗಳೆಂದು ಗುರುತಿಸಲಾಗಿದ್ದು, ಮುಂಜಾಗ್ರತೆಯಾಗಿ 2ಸಾವಿರದ 296 ಕಾಳಜಿ ಕೇಂದ್ರಗಳನ್ನು ಗುರುತಿಸಲಾಗಿದೆ.     ಬಿ.ಬಿ.ಎಂ.ಪಿ ವ್ಯಾಪ್ತಿಯಲ್ಲಿ 201 ಸ್ಥಳಗಳನ್ನು ಪ್ರವಾಹ ಬಾಧಿತ ಸ್ಥಳಗಳೆಂದು  ಗುರುತಿಸಲಾಗಿದೆ.  ರಾಜ್ಯದಲ್ಲಿ 45 ಮನೆಗಳು ಸಂಪೂರ್ಣವಾಗಿ ಹಾನಿಗೊಂಡಿದ್ದು, 1ಸಾವಿರದ 385 ಮನೆಗಳು ಭಾಗಶಃ ಹಾನಿಯಾಗಿದೆ ಎಂದು ತಿಳಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ – ಆಲಿಕಲ್ಲು ಮಳೆಯಿಂದ ರೈತರ ಬೆಳೆ ನಷ್ಟ
April 6, 2026
6:59 AM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!
April 5, 2026
1:27 PM
by: ಸಾಯಿಶೇಖರ್ ಕರಿಕಳ
ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಮತ್ತು ನಾಗರಿಕ ಸಂಸ್ಕೃತಿ – ಸಮಾಜದ ನಿಜವಾದ ಅಳತೆ
April 5, 2026
9:00 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಗುಜ್ಜೆ-ಕಡಲೆ ಗಸಿ – ಸರಳ ಪದಾರ್ಥಗಳಿಂದ ಸೊಗಸಾದ ಸಾಂಪ್ರದಾಯಿಕ ಸವಿರುಚಿ!
April 4, 2026
8:44 AM
by: ದಿವ್ಯ ಮಹೇಶ್

You cannot copy content of this page - Copyright -The Rural Mirror