ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಬಾಧಿತ ಪ್ರದೇಶಗಳಿಗೆ ತೆರಳಿ ಪರಿಹಾರ ಕಾರ್ಯದ ಉಸ್ತುವಾರಿ ನೋಡಿಕೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಮಳೆಯಿಂದ ಆಗಿರುವ ಅನಾಹುತದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದ ಮುಖ್ಯಮಂತ್ರಿ, ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಆದೇಶಿಸಿದರು. ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು, ಕಟ್ಟೆಚ್ಚರ ಮತ್ತು ತೀವ್ರ ನಿಗಾ ವಹಿಸಿ ತಕ್ಷಣ ಪರಿಹಾರ ಕಾರ್ಯಗಳನ್ನು ಸಮರೋಪಾದಿಯಲ್ಲಿ ನಿರ್ವಹಿಸಲು ಸೂಚನೆ ನೀಡಿದ್ದಾರೆ.
ಈ ಬಗ್ಗೆ ಸಮಗ್ರ ಅವಲೋಕನ ನಡೆಸಲು , ಇದೇ 30, 31 ರಂದು ಜಿಲ್ಲಾಧಿಕಾರಿ , ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸಭೆ ಕರೆಯುವಂತೆ ಮುಖ್ಯಮಂತ್ರಿಗಳು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದಾರೆ. ರಾಜ್ಯದಲ್ಲಿ 170 ತಾಲ್ಲೂಕುಗಳನ್ನು ಪ್ರವಾಹ, ಭೂಕುಸಿತಕ್ಕೆ ಗುರಿಯಾಗುವ ತಾಲ್ಲೂಕುಗಳೆಂದು ಗುರುತಿಸಲಾಗಿದ್ದು, ಮುಂಜಾಗ್ರತೆಯಾಗಿ 2ಸಾವಿರದ 296 ಕಾಳಜಿ ಕೇಂದ್ರಗಳನ್ನು ಗುರುತಿಸಲಾಗಿದೆ. ಬಿ.ಬಿ.ಎಂ.ಪಿ ವ್ಯಾಪ್ತಿಯಲ್ಲಿ 201 ಸ್ಥಳಗಳನ್ನು ಪ್ರವಾಹ ಬಾಧಿತ ಸ್ಥಳಗಳೆಂದು ಗುರುತಿಸಲಾಗಿದೆ. ರಾಜ್ಯದಲ್ಲಿ 45 ಮನೆಗಳು ಸಂಪೂರ್ಣವಾಗಿ ಹಾನಿಗೊಂಡಿದ್ದು, 1ಸಾವಿರದ 385 ಮನೆಗಳು ಭಾಗಶಃ ಹಾನಿಯಾಗಿದೆ ಎಂದು ತಿಳಿಸಿದರು.
ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದೆ.…
ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…
ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಸಮಾಜದ ನಿಜವಾದ ಸಂಸ್ಕೃತಿಯನ್ನು ತೋರಿಸುತ್ತದೆ. ಸಣ್ಣ ಸಣ್ಣ ಸರಿಯಾದ…
ಗುಜ್ಜೆ ಮತ್ತು ಕಡಲೆ ಬಳಸಿ ತಯಾರಿಸುವ ಸಾಂಪ್ರದಾಯಿಕ ಗಸಿ ರುಚಿಕರ ಆಹಾರ. ಚಪಾತಿ…
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…