ಹವಾಮಾನ ವರದಿ | 27-08-2025 | ವಾಯುಭಾರ ಕುಸಿತ ಅನಿಶ್ಚಿತ | ಮಳೆ ಮುಂದುವರಿಕೆ ಸಾಧ್ಯತೆ

August 27, 2025
12:25 PM
ಬಂಗಾಳಕೊಲ್ಲಿಯ ಒಡಿಸ್ಸಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಚಲನೆಯು ನಿಧಾನ ಗತಿಯಲ್ಲಿದ್ದು, ಪಥದ ಅನಿಶ್ಚಿತತೆ ಮುಂದುವರಿದಿದೆ.

28.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚೆನೆ ಇದೆ. ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರ ಮಳೆ ಸ್ವಲ್ಪ ಹೆಚ್ಚಾಗುವ ಸಾಧ್ಯತೆಗಳಿವೆ. ಈಗಿನಂತೆ ಸೆಪ್ಟೆಂಬರ್ 5ರ ತನಕವೂ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಮಲೆನಾಡು : ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಸಹ ಮಳೆಯ ಮುನ್ಸೂಚೆನೆ ಇದೆ. ಈಗಿನಂತೆ ಆಗಸ್ಟ್ 31ರ ತನಕ ಮಳೆ ಮುಂದುವರಿಯುವ ಸೂಚನೆಗಳಿವೆ.

ಒಳನಾಡು : ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಕೆಲವು ಭಾಗಗಳಲ್ಲಿ ಉತ್ತಮ ಮಳೆಯ ಸಾಧ್ಯತೆಯೂ ಇದೆ. ಈಗಿನಂತೆ ಆಗಸ್ಟ್ 29ರ ತನಕ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆ ಮುಂದುವರಿಯುವ ಸೂಚನೆಗಳಿವೆ.

ಬಂಗಾಳಕೊಲ್ಲಿಯ ಒಡಿಸ್ಸಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಚಲನೆಯು ನಿಧಾನ ಗತಿಯಲ್ಲಿದ್ದು, ಪಥದ ಅನಿಶ್ಚಿತತೆ ಮುಂದುವರಿದಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ…. 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!
March 28, 2026
2:03 PM
by: ಸಾಯಿಶೇಖರ್ ಕರಿಕಳ
ಬೀದಿ ನಾಯಿಗಳ ಸಮಸ್ಯೆ | 27,481 ನಾಯಿ ಕಡಿತ ಪ್ರಕರಣಗಳು ವರದಿ..!
March 28, 2026
11:07 AM
by: ಮಿರರ್‌ ಡೆಸ್ಕ್
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ
March 28, 2026
7:38 AM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 27-03-2026 | ಮಾರ್ಚ್ 28 ರಿಂದ ಮಳೆ ಹೆಚ್ಚಳ ಸೂಚನೆ | ರಾಜ್ಯಾದ್ಯಂತ ಗುಡುಗು ಸಹಿತ ಮಳೆಯ ಮುನ್ಸೂಚನೆ
March 27, 2026
1:12 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror