25.10.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಮುಂಜಾನೆಯಿಂದಲೇ ತುಂತುರು ಮಳೆಯ ಮುನ್ಸೂಚನೆ ಇದ್ದು, ಮಧ್ಯಾಹ್ನ ನಂತರ ಬಹುತೇಕ ಭಾಗಗಳಲ್ಲಿ ಮಳೆ ಹೆಚ್ಚಾಗುವ ಮುನ್ಸೂಚನೆ ಇದೆ. ಈ ಮಳೆಯು ನವೆಂಬರ್ 1 ನೇ ತಾರೀಕಿನ ತನಕವೂ ಮುಂದುವರಿಯುವ ಸಾಧ್ಯತೆಗಳಿವೆ
ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಈ ಮಳೆಯ ವಾತಾವರಣವು ಅಕ್ಟೊಬರ್ 29 ರ ತನಕ ಮುಂದುವರಿಯುವ ಮುನ್ಸೂಚನೆ ಇದೆ.

ಉತ್ತರ ಒಳನಾಡು : ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಯ ಒಂದೆರಡು ಭಾಗಗಳಲ್ಲಿ ಹಾಗೂ ಉಳಿದ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಉತ್ತರ ಒಳನಾಡು ಭಾಗಗಳಲ್ಲಿ ನವೆಂಬರ್ 1 ರ ತನಕವೂ ಮಳೆ ಮುಂದುವರಿಯುವ ಲಕ್ಷಣಗಳಿವೆ.
ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಈ ಮಳೆಯು ಅಕ್ಟೊಬರ್ 28 ರ ತನಕ ಮುಂದುವರಿಯುವ ಸೂಚನೆಗಳಿವೆ.
ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಉತ್ತರಕ್ಕೆ ಚಲಿಸಿ ಅಲ್ಲಿಂದ ವಾಯವ್ಯ ಕಡೆಗೆ ಸಾಗುವ ನಿರೀಕ್ಷೆ ಇದೆ. ಬಂಗಾಳಕೂಲ್ಲಿಯ ವಾಯುಭಾರ ಕುಸಿತವು ಇನ್ನೆರಡು ದಿನಗಳಲ್ಲಿ ಪ್ರಭಲಗೊಂಡು ತಮಿಳುನಾಡು, ಆಂದ್ರಾ ಕರಾವಳಿಯ ಸಮೀಪ ಬರುವ ಸಾಧ್ಯತೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.


