Advertisement
ವೆದರ್ ಮಿರರ್

ಹವಾಮಾನ ವರದಿ | 24-10-2025 | ಮಳೆ ಮುಂದುವರಿಕೆ – ವಾಯುಭಾರ ಕುಸಿತ ಏನಾಗುತ್ತಿದೆ…?

Share

25.10.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಮುಂಜಾನೆಯಿಂದಲೇ ತುಂತುರು ಮಳೆಯ ಮುನ್ಸೂಚನೆ ಇದ್ದು, ಮಧ್ಯಾಹ್ನ ನಂತರ ಬಹುತೇಕ ಭಾಗಗಳಲ್ಲಿ ಮಳೆ ಹೆಚ್ಚಾಗುವ ಮುನ್ಸೂಚನೆ ಇದೆ. ಈ ಮಳೆಯು ನವೆಂಬರ್ 1 ನೇ ತಾರೀಕಿನ ತನಕವೂ ಮುಂದುವರಿಯುವ ಸಾಧ್ಯತೆಗಳಿವೆ

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಈ ಮಳೆಯ ವಾತಾವರಣವು ಅಕ್ಟೊಬರ್ 29 ರ ತನಕ ಮುಂದುವರಿಯುವ ಮುನ್ಸೂಚನೆ ಇದೆ.

ಉತ್ತರ ಒಳನಾಡು : ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಯ ಒಂದೆರಡು ಭಾಗಗಳಲ್ಲಿ ಹಾಗೂ ಉಳಿದ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಉತ್ತರ ಒಳನಾಡು ಭಾಗಗಳಲ್ಲಿ ನವೆಂಬರ್ 1 ರ ತನಕವೂ ಮಳೆ ಮುಂದುವರಿಯುವ ಲಕ್ಷಣಗಳಿವೆ.

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಈ ಮಳೆಯು ಅಕ್ಟೊಬರ್ 28 ರ ತನಕ ಮುಂದುವರಿಯುವ ಸೂಚನೆಗಳಿವೆ.

ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಉತ್ತರಕ್ಕೆ ಚಲಿಸಿ ಅಲ್ಲಿಂದ ವಾಯವ್ಯ ಕಡೆಗೆ ಸಾಗುವ ನಿರೀಕ್ಷೆ ಇದೆ. ಬಂಗಾಳಕೂಲ್ಲಿಯ ವಾಯುಭಾರ ಕುಸಿತವು ಇನ್ನೆರಡು ದಿನಗಳಲ್ಲಿ ಪ್ರಭಲಗೊಂಡು ತಮಿಳುನಾಡು, ಆಂದ್ರಾ ಕರಾವಳಿಯ ಸಮೀಪ ಬರುವ ಸಾಧ್ಯತೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ದಾಖಲೆ ಉದ್ಯೋಗ ಸೃಷ್ಟಿ – 2.04 ಕೋಟಿ ಮಾನವ ದಿನಗಳ ಕೆಲಸ

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…

28 minutes ago

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…

20 hours ago

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ

ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…

1 day ago

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

2 days ago