Advertisement
ಸುದ್ದಿಗಳು

ದೇಶದ ಹಲವು ಭಾಗಗಳಲ್ಲಿ ಮಳೆ ಮುಂದುವರಿಕೆ | ಉತ್ತರ ಭಾರತದ ಹಲವೆಡೆ ಭಾರಿ ಮಳೆ | ಉತ್ತರ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆ |

Share

ದೇಶದ ಹಲವು ಭಾಗಗಳಲ್ಲಿ ಮಳೆ ಮುಂದುವರಿದಿದ್ದು, ಜಮ್ಮು ಮತ್ತು ಕಾಶ್ಮೀರ, ಲಡಾಖ್ ಸೇರಿದಂತೆ ಉತ್ತರ ಭಾರತದ ಹಲವಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಹಲವು ಕಡೆ  ಎಲ್ಲೋ ಆಲರ್ಟ್ ಘೋಷಿಸಲಾಗಿದೆ.  ದೆಹಲಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗುಡುಗು ಮತ್ತು ಮಿಂಚು ಸಹಿತ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಅಸ್ಸಾಂ, ಮೇಘಾಲಯ, ಛತ್ತೀಸ್ ಗಢ, ಕೊಂಕಣ, ಗೋವಾ, ಮಧ್ಯ ಮಹಾರಾಷ್ಟ್ರ ಮತ್ತು ತೆಲಂಗಾಣದಲ್ಲಿಯೂ ಇಂದು ಭಾರಿ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಆಂಧ್ರಪ್ರದೇಶ, ಕರ್ನಾಟಕ, ಕೇರಳ, ಮಾಹೆ, ಕೊಂಕಣ, ಗೋವಾ, ಲಕ್ಷದ್ವೀಪ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್ ನ  ಪ್ರತ್ಯೇಕ ಸ್ಥಳಗಳಲ್ಲಿ ಪ್ರಬಲ ಮೇಲ್ಮೈ ಗಾಳಿ ಬೀಸುವ ನಿರೀಕ್ಷೆಯಿದೆ.

ರಾಜ್ಯದಲ್ಲೂ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದೆ.  ಉತ್ತರಕನ್ನಡ ಜಿಲ್ಲೆ ಕರಾವಳಿ ತಾಲೂಕುಗಳಾದ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಹಾಗೂ ಭಟ್ಕಳಗಳಲ್ಲಿ ನಿರಂತರ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ ರಜೆ ಘೋಷಿಸಿದ್ದಾರೆ. ಕಳೆದ 24 ಗಂಟೆಗಳಲ್ಲಿ ಕುಮಟಾದಲ್ಲಿ ಅತೀ ಹೆಚ್ಚು 191.8 ಮೀಲಿ ಮೀಟರ್ ಮಳೆ ಸುರಿದಿದೆ. ಭಾರತೀಯ ಹವಾಮಾನ ಇಲಾಖೆ ಜಿಲ್ಲೆಯಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಿದ್ದು, ಆರೆಂಜ್ ಅಲರ್ಟ ಸೂಚನೆ ನೀಡಿದೆ. ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ

ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…

1 day ago

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!

ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…

1 day ago

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…

1 day ago

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

2 days ago

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

2 days ago