ದೇಶದ ಹಲವು ಭಾಗಗಳಲ್ಲಿ ಮಳೆ ಮುಂದುವರಿದಿದ್ದು, ಜಮ್ಮು ಮತ್ತು ಕಾಶ್ಮೀರ, ಲಡಾಖ್ ಸೇರಿದಂತೆ ಉತ್ತರ ಭಾರತದ ಹಲವಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಹಲವು ಕಡೆ ಎಲ್ಲೋ ಆಲರ್ಟ್ ಘೋಷಿಸಲಾಗಿದೆ. ದೆಹಲಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗುಡುಗು ಮತ್ತು ಮಿಂಚು ಸಹಿತ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಅಸ್ಸಾಂ, ಮೇಘಾಲಯ, ಛತ್ತೀಸ್ ಗಢ, ಕೊಂಕಣ, ಗೋವಾ, ಮಧ್ಯ ಮಹಾರಾಷ್ಟ್ರ ಮತ್ತು ತೆಲಂಗಾಣದಲ್ಲಿಯೂ ಇಂದು ಭಾರಿ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಆಂಧ್ರಪ್ರದೇಶ, ಕರ್ನಾಟಕ, ಕೇರಳ, ಮಾಹೆ, ಕೊಂಕಣ, ಗೋವಾ, ಲಕ್ಷದ್ವೀಪ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್ ನ ಪ್ರತ್ಯೇಕ ಸ್ಥಳಗಳಲ್ಲಿ ಪ್ರಬಲ ಮೇಲ್ಮೈ ಗಾಳಿ ಬೀಸುವ ನಿರೀಕ್ಷೆಯಿದೆ.
ರಾಜ್ಯದಲ್ಲೂ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಉತ್ತರಕನ್ನಡ ಜಿಲ್ಲೆ ಕರಾವಳಿ ತಾಲೂಕುಗಳಾದ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಹಾಗೂ ಭಟ್ಕಳಗಳಲ್ಲಿ ನಿರಂತರ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ ರಜೆ ಘೋಷಿಸಿದ್ದಾರೆ. ಕಳೆದ 24 ಗಂಟೆಗಳಲ್ಲಿ ಕುಮಟಾದಲ್ಲಿ ಅತೀ ಹೆಚ್ಚು 191.8 ಮೀಲಿ ಮೀಟರ್ ಮಳೆ ಸುರಿದಿದೆ. ಭಾರತೀಯ ಹವಾಮಾನ ಇಲಾಖೆ ಜಿಲ್ಲೆಯಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಿದ್ದು, ಆರೆಂಜ್ ಅಲರ್ಟ ಸೂಚನೆ ನೀಡಿದೆ. ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.
ಶಬರಿಮಲೆಯಲ್ಲಿ ತುಲಾ ಮಾಸದ ಪೂಜೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಆನ್‌ಲೈನ್ ಕೊಠಡಿ ಬುಕ್ಕಿಂಗ್…
ಕೇಂದ್ರ ಸರ್ಕಾರ 2015ರಲ್ಲಿ ದೇಶೀಯ ಹಾಗೂ ಆಮದು ಯೂರಿಯಾಗೆ ಬೇವು ಲೇಪನ ಕಡ್ಡಾಯಗೊಳಿಸುವ…
ಮನೆತನವನ್ನು ಕಟ್ಟುವುದು ಕೇವಲ ಆರ್ಥಿಕ ಸೌಲಭ್ಯಗಳನ್ನು ಒದಗಿಸುವುದಲ್ಲ; ಕುಟುಂಬದ ಸದಸ್ಯರ ನಡುವೆ ಪ್ರೀತಿ,…
ಮ್ಯಾನ್ಮಾರ್‌ನಿಂದ ಮಿಜೋರಾಂ ಮೂಲಕ ಸುಮಾರು ₹1,022 ಕೋಟಿ ಮೌಲ್ಯದ 3,103 ಮೆಟ್ರಿಕ್ ಟನ್…
ಅ.11ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದ್ದರೂ, ಅ.14–16ರಿಂದ ಹಿಂಗಾರು…
ಕೃಷಿ ಸೇರಿದಂತೆ ಕುಟುಂಬದ ಬದುಕಿನಲ್ಲಿ ಕಾಣದ ಶ್ರಮವನ್ನು ಗುರುತಿಸಿ ಮೆಚ್ಚುಗೆ ವ್ಯಕ್ತಪಡಿಸುವುದು ಸಂಬಂಧಗಳನ್ನು…