ಹವಾಮಾನ ವರದಿ | 28-07-2024 | ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರದಿಂದ ಉತ್ತಮ ಮಳೆ ಸಾಧ್ಯತೆ |

July 28, 2024
11:55 AM

29.07.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರದಿಂದ ಉತ್ತಮ ಮಳೆಯ ಮುನ್ಸೂಚನೆ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಉತ್ತಮ ಹಾಗೂ ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ಬೀದರ್ ಹಾಗೂ ಯಾದಗಿರಿ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಈಗಿನಂತೆ ಆಗಷ್ಟ್ 1 ರ ತನಕ ಕರಾವಳಿ ಭಾಗಗಳಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ. 2 ನೇ ತಾರೀಕಿನಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಆಗಷ್ಟ್ 4 ಅಥವಾ 5 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.  ಮಧ್ಯಪ್ರದೇಶದಲ್ಲಿ ವಾಯುಭಾರ ಕುಸಿತದಂತ ತಿರುವಿಕೆ ಉಂಟಾಗಿದ್ದರ ಪರಿಣಾಮ ದಕ್ಷಿಣ ಭಾರತದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗುತ್ತಿದೆ. ಈ ತಿರುಗುವಿಕೆಯು ಪಶ್ಚಿಮಾಭಿಮುಖವಾಗಿ ಚಲಿಸುವ ಸಾಧ್ಯತೆ ಇದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ
October 10, 2026
2:55 PM
by: ದ ರೂರಲ್ ಮಿರರ್.ಕಾಂ
ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ
October 10, 2026
2:51 PM
by: ದ ರೂರಲ್ ಮಿರರ್.ಕಾಂ
ಡಿಸೆಂಬರ್‌ನಲ್ಲಿ ಮತ್ತಷ್ಟು ತೀವ್ರಗೊಳ್ಳಲಿದೆಯೇ ಎಲ್‌ನಿನೋ..? ಬರ, ಪ್ರವಾಹದ ಅಪಾಯದ ಬಗ್ಗೆ ವಿಶ್ವ ಹವಾಮಾನ ಸಂಸ್ಥೆ ಎಚ್ಚರಿಕೆ
October 10, 2026
2:44 PM
by: ದ ರೂರಲ್ ಮಿರರ್.ಕಾಂ
ಉಪ್ಪಿನಂಗಡಿಯ ಮೌಲ್ಯಾಧಾರಿತ ಶಿಕ್ಷಣ ಕ್ರಾಂತಿಯ ಹರಿಕಾರ ಯು.ಜಿ. ರಾಧ ಭಟ್ – ಗ್ರಾಮೀಣ ನೆಲದಲ್ಲಿ ಅರಳಿದ ಶ್ರೀರಾಮ ಶಾಲೆಯ ಯಶೋಗಾಥೆ
October 10, 2026
2:06 PM
by: ಅರುಣ್‌ ಕುಮಾರ್ ಕಾಂಚೋಡು

You cannot copy content of this page - Copyright -The Rural Mirror