29.07.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರದಿಂದ ಉತ್ತಮ ಮಳೆಯ ಮುನ್ಸೂಚನೆ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಉತ್ತಮ ಹಾಗೂ ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ಬೀದರ್ ಹಾಗೂ ಯಾದಗಿರಿ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಆಗಷ್ಟ್ 1 ರ ತನಕ ಕರಾವಳಿ ಭಾಗಗಳಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ. 2 ನೇ ತಾರೀಕಿನಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಆಗಷ್ಟ್ 4 ಅಥವಾ 5 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಮಧ್ಯಪ್ರದೇಶದಲ್ಲಿ ವಾಯುಭಾರ ಕುಸಿತದಂತ ತಿರುವಿಕೆ ಉಂಟಾಗಿದ್ದರ ಪರಿಣಾಮ ದಕ್ಷಿಣ ಭಾರತದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗುತ್ತಿದೆ. ಈ ತಿರುಗುವಿಕೆಯು ಪಶ್ಚಿಮಾಭಿಮುಖವಾಗಿ ಚಲಿಸುವ ಸಾಧ್ಯತೆ ಇದೆ.
ನಗರೀಕರಣದ ನಡುವೆ ಪ್ರಕೃತಿ ಮತ್ತು ವನ್ಯಜೀವಿಗಳ ನಡುವಿನ ಸಮತೋಲನ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು…
ಮಂಗಳೂರಿನಲ್ಲಿ ಕೊರಿಯರ್ ಮೂಲಕ ಎಂಡಿಎಂಎ ಸಾಗಾಟ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು…
ಎಲ್‌ನಿನೋ ವಿದ್ಯಮಾನವು ಡಿಸೆಂಬರ್‌ನಲ್ಲಿ ಗರಿಷ್ಠ ತೀವ್ರತೆ ತಲುಪುವ ಸಾಧ್ಯತೆಯಿದ್ದು, 2027ರ ಫೆಬ್ರವರಿವರೆಗೆ ಮುಂದುವರಿಯಬಹುದು…
ಉಪ್ಪಿನಂಗಡಿಯ ಶ್ರೀರಾಮ ಶಾಲೆಯ ಬೆಳವಣಿಗೆಯಲ್ಲಿ ಯು.ಜಿ. ರಾಧ ಭಟ್ ಅವರು ಸುಮಾರು 18…
ಅಕ್ಟೋಬರ್ 11ರಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಿ ಬಿಸಿಲಿನ ವಾತಾವರಣ ಮುಂದುವರಿಯುವ…
ಶಬರಿಮಲೆಯಲ್ಲಿ ತುಲಾ ಮಾಸದ ಪೂಜೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಆನ್‌ಲೈನ್ ಕೊಠಡಿ ಬುಕ್ಕಿಂಗ್…