ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆ | ಇದುವರೆಗೆ ಆದ ಹಾನಿ ಎಷ್ಟು..?

August 28, 2025
7:25 PM

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಧಾರಾಕಾರ ಮಳೆಯಾಗುತ್ತಿದ್ದು, ಇಂದು ಕೂಡ ಮುಂದುವರಿದಿದೆ. ನಿರಂತರ ಮಳೆಯ ಹಿನ್ನೆಲೆಯಲ್ಲಿ ಇಂದು ಜಿಲ್ಲೆಯ ಮಂಗಳೂರು, ಪುತ್ತೂರು, ಬಂಟ್ವಾಳ, ಮುಲ್ಕಿ-ಮೂಡುಬಿದಿರೆ ಮತ್ತು ಉಳ್ಳಾಲ ತಾಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು.

ದಕ್ಷಿಣ ಕನ್ನಡ  ಜಿಲ್ಲೆಯಲ್ಲಿ ಈ ಬಾರಿ ಮುಂಗಾರು ಆರಂಭದಿಂದಲೂ ಉತ್ತಮ ಮಳೆಯಾಗಿದೆ. ಭಾರೀ ಗಾಳಿ ಮಳೆಯ ಕಾರಣ ಅಲ್ಲಲ್ಲಿ ಪ್ರಾಕೃತಿಕ ವಿಕೋಪ ಸಂಭವಿಸಿ ಸಾಕಷ್ಟು ಆಸ್ತಿ ಪಾಸ್ತಿ ನಷ್ಟ ಉಂಟಾಗಿದೆ. ಏಪ್ರಿಲ್ 1 ರಿಂದ ಆ.27 ರವರೆಗೆ 1607 ಮನೆಗಳಿಗೆ  ಹಾನಿ ಉಂಟಾಗಿದೆ. ಈ ಪೈಕಿ 154 ಮನೆಗಳು ಸಂಪೂರ್ಣ ಹಾನಿಯಾಗಿವೆ. 3302 ಹೆಕ್ಟೇರ್ ಕೃಷಿ ಮತ್ತು 17245 ಹೆಕ್ಟೇರ್ ಪ್ರದೇಶದಲ್ಲಿನ ತೋಟಗಾರಿಕಾ ಬೆಳೆಗಳಿಗೆ ಹಾನಿ ಉಂಟಾಗಿದೆ. 7725 ವಿದ್ಯುತ್ ಕಂಬಗಳು ಧರೆಗುರುಳಿದ್ದು, 263 ಟ್ರಾನ್ಸ್‌ಫಾರ್ಮರ್‌ಗಳು ಹಾನಿಗೊಂಡಿವೆ. 300 ಕಿಲೋಮೀಟರ್ ಉದ್ದದ ರಸ್ತೆಗಳು ಹದಗೆಟ್ಟಿವೆ  ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ…. 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್
October 17, 2026
7:30 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ
October 17, 2026
7:23 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ
October 16, 2026
5:14 PM
by: ವಿಶೇಷ ಪ್ರತಿನಿಧಿ
ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ
October 16, 2026
3:42 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror