ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಇಂದು ಕೂಡ ಮುಂದುವರಿದಿದೆ. ನಿರಂತರ ಮಳೆಯ ಹಿನ್ನೆಲೆಯಲ್ಲಿ ಇಂದು ಜಿಲ್ಲೆಯ ಮಂಗಳೂರು, ಪುತ್ತೂರು, ಬಂಟ್ವಾಳ, ಮುಲ್ಕಿ-ಮೂಡುಬಿದಿರೆ ಮತ್ತು ಉಳ್ಳಾಲ ತಾಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಬಾರಿ ಮುಂಗಾರು ಆರಂಭದಿಂದಲೂ ಉತ್ತಮ ಮಳೆಯಾಗಿದೆ. ಭಾರೀ ಗಾಳಿ ಮಳೆಯ ಕಾರಣ ಅಲ್ಲಲ್ಲಿ ಪ್ರಾಕೃತಿಕ ವಿಕೋಪ ಸಂಭವಿಸಿ ಸಾಕಷ್ಟು ಆಸ್ತಿ ಪಾಸ್ತಿ ನಷ್ಟ ಉಂಟಾಗಿದೆ. ಏಪ್ರಿಲ್ 1 ರಿಂದ ಆ.27 ರವರೆಗೆ 1607 ಮನೆಗಳಿಗೆ ಹಾನಿ ಉಂಟಾಗಿದೆ. ಈ ಪೈಕಿ 154 ಮನೆಗಳು ಸಂಪೂರ್ಣ ಹಾನಿಯಾಗಿವೆ. 3302 ಹೆಕ್ಟೇರ್ ಕೃಷಿ ಮತ್ತು 17245 ಹೆಕ್ಟೇರ್ ಪ್ರದೇಶದಲ್ಲಿನ ತೋಟಗಾರಿಕಾ ಬೆಳೆಗಳಿಗೆ ಹಾನಿ ಉಂಟಾಗಿದೆ. 7725 ವಿದ್ಯುತ್ ಕಂಬಗಳು ಧರೆಗುರುಳಿದ್ದು, 263 ಟ್ರಾನ್ಸ್‌ಫಾರ್ಮರ್‌ಗಳು ಹಾನಿಗೊಂಡಿವೆ. 300 ಕಿಲೋಮೀಟರ್ ಉದ್ದದ ರಸ್ತೆಗಳು ಹದಗೆಟ್ಟಿವೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ ಸೇರಿಕೊಳ್ಳಿ….
ಡಾರ್ಜಿಲಿಂಗ್–ಸಿಕ್ಕಿಂ ಹಿಮಾಲಯಗಳಲ್ಲಿ ಮಾರುಕಟ್ಟೆ ಸಂಪರ್ಕದ ಕೊರತೆಯಿಂದ ಕೃಷಿ ಆದಾಯ ಕುಸಿತವಾಗಿದೆ. ಕಳಪೆ ರಸ್ತೆ,…
12.01.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಬರ ಪ್ರದೇಶ ಕೃಷಿಗೆ ಹೊಸ ದಾರಿ ತೆರೆದಿರುವ ICAR–ಒಂಟೆ ಸಂಶೋಧನಾ ಕೇಂದ್ರದ ಅಧ್ಯಯನವು,…
ರಾಜಸ್ಥಾನದ ಹನುಮಂಗಢ ಜಿಲ್ಲೆಯಲ್ಲಿ ಇಬ್ಬರು ಗ್ರಾಮೀಣ ಉದ್ಯಮಿಗಳು ಆರಂಭಿಸಿದ ಗ್ರೀನ್ ವಿಷನ್ ವರ್ಮಿಕಾಂಪೋಸ್ಟ್…
ಚೀನಾದ Chinese Academy of Tropical Agricultural Sciences (CATAS) ವಿಜ್ಞಾನಿಗಳು Electron…
ಕೃಷಿ ಭೂಮಿಯ ಲಭ್ಯತೆ ಕಡಿಮೆಯಾಗಿ ಸಂಕಷ್ಟದಲ್ಲಿರುವ ರೈತರಿಗಾಗಿ ಸರ್ಕಾರವು ಅರಣ್ಯ ಭೂಮಿಯನ್ನು ಕೃಷಿ…