ರಾಜ್ಯದಲ್ಲಿ ಹಿಂಗಾರು ಅವಧಿಯಲ್ಲಿ 56 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ ಸಂಭವಿಸಿದ್ದು, 21 ಜನರು ಜೀವ ಕಳೆದುಕೊಂಡಿದ್ದಾರೆ. ಅತಿವೃಷ್ಟಿಯ ಪರಿಣಾಮಗಳ ಬಗ್ಗೆ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಎಲ್ಲಾ ಜಿಲ್ಲಾಧಿಕಾರಿಗಳ ಸಭೆ ನಡೆಯಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಮಳೆಯಿಂದ ಹಾನಿಯಾಗಿರುವ ಪ್ರದೇಶಗಳ ಪರಿಶೀಲನೆ ನಡೆಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಅತಿವೃಷ್ಟಿಯ ಪರಿಣಾಮಗಳ ಬಗ್ಗೆ ನಾಳೆ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಎಲ್ಲಾ ಜಿಲ್ಲಾಧಿಕಾರಿಗಳ ಸಭೆ ನಡೆಯಲಿದೆ. ಜಂಟಿ ಸಮೀಕ್ಷಾ ವರದಿಗಳ ಪರಿಶೀಲನೆಯ ನಂತರ 15 ದಿನಗಳಲ್ಲಿ ರೈತರಿಗೆ ಪರಿಹಾರ ನೀಡಲಾಗುವುದು ಎಂದರು. ಚಿತ್ರದುರ್ಗ ಜಿಲ್ಲೆಯ ಬೆಳಘಟ್ಟ, ವಿಜಾಪುರ ಲಕ್ಷ್ಮೀಸಾಗರ, ಗೌರಮ್ಮನಹಳ್ಳಿ ಮತ್ತು ಸಾದರಹಳ್ಳಿ ಗ್ರಾಮಗಳಿಗೆ ಭೇಟಿ ನೀಡಿದ ಸಚಿವರು, ಈರುಳ್ಳಿ, ಮೆಕ್ಕೆಜೋಳ, ಕಡಲೆಕಾಯಿ ಮತ್ತು ಇತರ ಮಳೆ ಆಶ್ರಿತ ಬೆಳೆಗಳ ಹಾನಿಯಾದ ಪ್ರದೇಶಗಳಿಗೆ ಭೇಟಿ ನೀಡಿ, ರೈತರೊಂದಿಗೆ ಮಾತನಾಡಿದರು.
ಗದಗ ಜಿಲ್ಲೆಯಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಜಿಲ್ಲಾಡಳಿತ ನಿರ್ಧರಿಸಿದೆ.…
ಯಾದಗಿರಿ ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು, ಸೋಯಾಬೀನ್ ಹಾಗೂ ಸೂರ್ಯಕಾಂತಿ ಖರೀದಿಗೆ…
ಕರಾವಳಿ ಮತ್ತು ಮಲೆನಾಡು ಭಾಗದ ಜನರು ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ…
ಹಾಲಿನ ದರ ಹೆಚ್ಚಳ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ನಿರ್ಧಾರ…
ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆಯಿದ್ದು, ಅ.9…
ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಸಕ್ರಿಯವಾಗಿದ್ದು, ಕರಾವಳಿ ಮತ್ತು ಮಲೆನಾಡು ಸೇರಿದಂತೆ ಹಲವೆಡೆ ಉತ್ತಮ…