ಕರಾವಳಿ ಭಾಗದಲ್ಲಿ ಕಳೆದೆರಡು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಅಲ್ಲದೆ ಕೆಲವೆಡೆಗಳಲ್ಲಿ ಹಾನಿ ಸಂಭವಿಸಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶೀಘ್ರವೇ ಪರಿಹಾರವನ್ನು ನಿಡುವಂತೆ ಸೂಚಿಸಿದ್ದಾರೆ. ಈ ಸಂಬಂಧ ಸಿಎಂ ಟ್ವೀಟ್ ಮಾಡಿದ್ದು, ಮೂರು ಜಿಲ್ಲೆಯ ಉಸ್ತುವಾರಿ ಸಚಿವರುಗಳಿಗೆ ಮಳೆಹಾನಿ ಪ್ರದೇಶಕ್ಕೆ ಭೇಟಿ ನೀಡುವಂತೆ ಸೂಚಿಸಿದ್ದಾರೆ.
ಟ್ವೀಟ್ನಲ್ಲೇನಿದೆ..?: ದಕ್ಷಿಣ ಕನ್ನಡ #DakshinaKannada, ಉತ್ತರ ಕನ್ನಡ #UttaraKannada ಹಾಗೂ ಉಡುಪಿ #Udupi ಜಿಲ್ಲೆಗಳಲ್ಲಿ ಮಳೆಯಿಂದ ಹಾನಿ ಸಂಭವಿಸಿದ್ದು ಕೂಡಲೇ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಳೆಯಿಂದ ಹಾನಿ ಸಂಭವಿಸಿದ್ದು ಕೂಡಲೇ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ @siddaramaiah ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
Advertisementಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರುಗಳಾದ ದಿನೇಶ್ ಗುಂಡೂರಾವ್, ಲಕ್ಷ್ಮೀ…
— CM of Karnataka (@CMofKarnataka) July 6, 2023
Advertisement