#HeavyRain| ದ.ಕನ್ನಡ, ಉ. ಕನ್ನಡ, ಉಡುಪಿ ಜಿಲ್ಲೆಯಲ್ಲಿ ಮಳೆ ಅನಾಹುತ | ಮಳೆ ಹಾನಿಗೆ ಶೀಘ್ರವೇ ಪರಿಹಾರ ನೀಡಿ | ಸಿಎಂ ಸೂಚನೆ

July 6, 2023
2:06 PM
ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಳೆಯಿಂದ ಹಾನಿ ಸಂಭವಿಸಿದ್ದು ಕೂಡಲೇ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಕರಾವಳಿ ಭಾಗದಲ್ಲಿ ಕಳೆದೆರಡು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಅಲ್ಲದೆ ಕೆಲವೆಡೆಗಳಲ್ಲಿ ಹಾನಿ ಸಂಭವಿಸಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶೀಘ್ರವೇ ಪರಿಹಾರವನ್ನು ನಿಡುವಂತೆ ಸೂಚಿಸಿದ್ದಾರೆ. ಈ ಸಂಬಂಧ ಸಿಎಂ ಟ್ವೀಟ್ ಮಾಡಿದ್ದು, ಮೂರು ಜಿಲ್ಲೆಯ ಉಸ್ತುವಾರಿ ಸಚಿವರುಗಳಿಗೆ ಮಳೆಹಾನಿ ಪ್ರದೇಶಕ್ಕೆ ಭೇಟಿ ನೀಡುವಂತೆ ಸೂಚಿಸಿದ್ದಾರೆ.

ಟ್ವೀಟ್‍ನಲ್ಲೇನಿದೆ..?: ದಕ್ಷಿಣ ಕನ್ನಡ #DakshinaKannada, ಉತ್ತರ ಕನ್ನಡ #UttaraKannada ಹಾಗೂ ಉಡುಪಿ #Udupi ಜಿಲ್ಲೆಗಳಲ್ಲಿ ಮಳೆಯಿಂದ ಹಾನಿ ಸಂಭವಿಸಿದ್ದು ಕೂಡಲೇ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರುಗಳಾದ ದಿನೇಶ್ ಗುಂಡೂರಾವ್, ಲಕ್ಷ್ಮೀ ಹೆಬ್ಬಾಳಕರ್ ಹಾಗೂ ಮಾಂಕಾಳ ವೈದ್ಯ ಅವರಿಗೆ ಸೂಚಿಸಲಾಗಿದೆ. ಮಳೆ ಹಾನಿ ಕುರಿತು ಮುಖ್ಯ ಕಾರ್ಯದರ್ಶಿಗಳಿಂದ ಮಾಹಿತಿ ಪಡೆಯಲಾಗಿದ್ದು, ಪರಿಹಾರ ಕಾಮಗಾರಿಗಳಿಗೆ ಅಧಿಕಾರಿಗಳನ್ನು ತುರ್ತಾಗಿ ಸಜ್ಜುಗೊಳಿಸುವಂತೆ ಆದೇಶಿಸಲಾಗಿದೆ.
ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿಯೂ ಭಾರೀ ಮಳೆಯಾಗುತ್ತಿದೆ. ಉಡುಪಿಯಲ್ಲಿ ಭಾರೀ ಮಳೆಗೆ ಈಗಾಗಲೇ ಇಬ್ಬರು ಜೀವ ಕಳೆದುಕೊಂಡಿದ್ದಾರೆ. ಇನ್ನು ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚನೆ ನೀಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಕೂಡ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ
September 13, 2026
9:08 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?
September 13, 2026
12:16 PM
by: ಸಾಯಿಶೇಖರ್ ಕರಿಕಳ
ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು
September 13, 2026
8:13 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ
September 12, 2026
12:52 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror