Advertisement
ವೆದರ್ ಮಿರರ್

ಹವಾಮಾನ ವರದಿ | 20-10-2025 | ಅ.29 ರ ತನಕ ಮಳೆ ನಿರೀಕ್ಷೆ | ವಾಯುಭಾರ ಕುಸಿತ ಏನಾಗಬಹುದು..?

Share

21.10.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಕರಾವಳಿ ಜಿಲ್ಲೆಗಳಲ್ಲಿ ಅಕ್ಟೊಬರ್ 29ರ ತನಕ ಮಳೆ ಮುಂದುವರಿಯುವ ಮುನ್ಸೂಚೆನೆ ಇದೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಮಲೆನಾಡು ಭಾಗಗಳಲ್ಲಿ ಅಕ್ಟೊಬರ್ 28ರ ತನಕ ಈ ಮಳೆ ಮುಂದುವರಿಯುವ ಸಾಧ್ಯತೆಗಳಿವೆ.

ಉತ್ತರ ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರ್ಗಿ ಜಿಲ್ಲೆಗಳ ಅಲ್ಲಲ್ಲಿ, ಧಾರವಾಡ, ಹಾವೇರಿ, ಗದಗ, ವಿಜಯನಗರ, ದಾವಣಗೆರೆ, ಬಳ್ಳಾರಿ, ಕೊಪ್ಪಳ, ರಾಯಚೂರು, ಯಾದಗಿರಿ, ಬೀದರ್ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಕ್ಟೊಬರ್ 29ರ ತನಕ ಮಳೆ ಮುಂದುವರಿಯುವ ಸೂಚನೆಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

ದಕ್ಷಿಣ ಒಳನಾಡು : ಮೈಸೂರು, ಚಾಮರಾಜನಗರ, ಮಂಡ್ಯ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದು, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಹಿತ), ಚಿತ್ರದುರ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಂಜೆ ಅಥವಾ ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ದಕ್ಷಿಣ ಒಳನಾಡು ಭಾಗಗಳಲ್ಲಿ ಅಕ್ಟೊಬರ್ 29ರ ತನಕ ಈ ಮಳೆ ಮುಂದುವರಿಯುವ ಮುನ್ಸೂಚೆನೆ ಇದೆ.

ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಅಕ್ಟೊಬರ್ 23 ರ ಸುಮಾರಿಗೆ ಚಂಡಮಾರುತವಾಗಿ ಪರಿವರ್ತನೆಗೊಂಡು ತಮಿಳುನಾಡು ಕರಾವಳಿ ಸಮೀಪ ತಲಪುವ ನಿರೀಕ್ಷೆ ಇದೆ. ಒಂದು ಲೆಕ್ಕಾಚಾರದಂತೆ ಭಾರತದ ಪೂರ್ವ ಕರಾವಳಿಯಲ್ಲಿ ಉತ್ತರಕ್ಕೆ ಚಲಿಸುವ ಸಾಧ್ಯತೆಗಳಿವೆ. ಈ ರೀತಿ ಆದರೆ ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಬಹುದು.  ಇನ್ನೊಂದು ವರದಿಯಂತೆ ತಮಿಳುನಾಡು ಕರಾವಳಿ ಮೂಲಕ ಭೂ ಪ್ರವೇಶಿಸಿ ಅಕ್ಟೊಬರ್ 26ರ ಸುಮಾರಿಗೆ ಅರಬ್ಬಿ ಸಮುದ್ರ ಸೇರುವ ನಿರೀಕ್ಷೆ ಇದೆ. ಈ ರೀತಿಯಾದ ರಾಜ್ಯದಲ್ಲಿ ಭಾರಿ ಮಳೆಯ ಸಾಧ್ಯತೆ ಇದೆ.  ಚಲಿಸುವ ಪಥ ಇನ್ನೂ ನಿಶ್ಚಿತವಾಗಿಲ್ಲ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ವಿಶ್ವದ ಶೇ.79ರಷ್ಟು ನದಿಗಳಲ್ಲಿ ಆಮ್ಲಜನಕ ಕುಸಿತ- ಉಷ್ಣವಲಯದ ನದಿಗಳಿಗೆ ಹೆಚ್ಚು ಅಪಾಯ

ವಿಶ್ವದ 21,439 ನದಿ ತೋಡುಗಳ ಅಧ್ಯಯನದಲ್ಲಿ ಶೇ.78.8ರಷ್ಟು ನದಿಗಳಲ್ಲಿ ಕಳೆದ ನಾಲ್ಕು ದಶಕಗಳಲ್ಲಿ…

3 hours ago

ಹವಾಮಾನ ವರದಿ | 23-09-2026 | ಸೆ.30 ರಿಂದ ಮತ್ತೆ ಬದಲಾಗಲಿದೆ ಹವಾಮಾನ..!

ಕರ್ನಾಟಕದಲ್ಲಿ ಸದ್ಯ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.26 ರವರೆಗೆ ಅಲ್ಲಲ್ಲಿ ತುಂತುರು…

11 hours ago

ಕರ್ನಾಟಕದಲ್ಲಿ ಮುಂದಿನ 4 ದಿನ ಭಾರೀ ಮಳೆ ಸಾಧ್ಯತೆ..! ಎಲ್ಲೆಲ್ಲಾ ರೆಡ್‌ ಎಲರ್ಟ್..?‌ ಯಾವಾಗ..?

ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಮಳೆ ಚುರುಕಾಗಲಿದ್ದು,…

15 hours ago

₹1.65 ಲಕ್ಷದ ಐಫೋನ್‌ಗಾಗಿ ಬೆಳಗ್ಗೆಯಿಂದಲೇ ಸರದಿ..! ಬೆಂಗಳೂರಿನಿಂದ ಮುಂಬೈವರೆಗೆ ಕಂಡ ‘ಐಫೋನ್‌ ಕ್ರೇಜ್’

₹1.65 ಲಕ್ಷದಿಂದ ಬೆಲೆ ಆರಂಭವಾಗುವ ಐಫೋನ್‌ 18 ಪ್ರೊ ಖರೀದಿಗಾಗಿ ದೇಶದ ಹಲವು…

2 days ago

ಹವಾಮಾನ ವರದಿ | 21-09-2026 | ಕರಾವಳಿಯಲ್ಲಿ ಜೋರು ಮಳೆಯ ಸಾಧ್ಯತೆ ಕಡಿಮೆ

ಅರಬ್ಬಿ ಸಮುದ್ರದ ಕಡೆಯಿಂದ ಬೀಸುವ ಗಾಳಿಯ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಮುನ್ಸೂಚನೆಯಲ್ಲಿದ್ದಷ್ಟು…

2 days ago

ಹವಾಮಾನ ವರದಿ | 20.09.2026 |ಕರ್ನಾಟಕದಲ್ಲಿ ಸೆ.25ರವರೆಗೆ ಮಳೆಯ ಲಕ್ಷಣ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಸಾಧ್ಯತೆ

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…

3 days ago