ಹವಾಮಾನ ವರದಿ | 23-09-2025 | ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಮುನ್ಸೂಚನೆ | ಇನ್ನೊಂದು ಚಂಡಮಾರುತ..!

September 23, 2025
2:24 PM
ದಕ್ಷಿಣ ಚೀನಾದ ಕರಾವಳಿಯಲ್ಲಿ ಪ್ರಭಲ ಚಂಡಮಾರುತದ ಪ್ರಭಾವದಿಂದ ಬಂಗಾಳಕೊಲ್ಲಿಯಲ್ಲಿ ಗಾಳಿಯ ಬೀಸುವಿಕೆ ಉತ್ತಮವಾಗಿದೆ. ಈ ಚಂಡಮಾರುತವು ಶಿಥಿಲಗೊಳ್ಳುತ್ತಿದ್ದಂತೆಯೇ ಸೆಪ್ಟೆಂಬರ್ 25ರಂದು ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆಗಳಿವೆ. ಇದೇ ಸಮಯದಲ್ಲಿ ವಿಯೆಟ್ನಾಂ, ಇಂಡೋನೇಷ್ಯಾ, ಫಿಲಿಪ್ಪೀನ್ಸ್ ಮಧ್ಯೆ ದಕ್ಷಿಣ ಚೀನಾ ಸಮುದ್ರದಲ್ಲಿ ಇನ್ನೊಂದು ಚಂಡಮಾರುತ ಉಂಟಾಗುವ ಲಕ್ಷಣಗಳಿವೆ.

24.09.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಮಳೆಯ ಅವಧಿ ಸ್ವಲ್ಪ ಹೆಚ್ಚಿರಬಹುದು. ಈಗಿನಂತೆ ಈ ಮಳೆಯ ವಾತಾವರಣವು ಈ ತಿಂಗಳ ಅಂತ್ಯದವರೆಗೂ ಮುಂದುವರಿಯುವ ಸಾಧ್ಯತೆಗಳಿವೆ. 27ರಿಂದ ಮಳೆ ಸ್ವಲ್ಪ ಹೆಚ್ಚಾಗುವ ಸೂಚನೆಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

ಮಲೆನಾಡು : ಕೊಡಗು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯ ಹಲವು ಭಾಗಗಳಲ್ಲಿ ಮಳೆಯ ಮುನ್ಸೂಚೆನೆ ಇದೆ. ಈಗಿನಂತೆ ಇದೇ ವಾತಾವರಣವು ಸೆಪ್ಟೆಂಬರ್ 26ರ ತನಕ ಮುಂದುವರಿಲಿದ್ದು, ನಂತರ ಮಳೆಯ ಪ್ರಮಾಣವು ಸ್ವಲ್ಪ ಹೆಚ್ಚಾಗಬಹುದು.

ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಹೆಚ್ಚಿನ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಉತ್ತರ ಒಳನಾಡು ಭಾಗಗಳಲ್ಲಿ ಈ ತಿಂಗಳ ಕೊನೆಯವರೆಗೂ ಮಳೆ ಮುಂದುವರಿಯುವ ಲಕ್ಷಣಗಳಿವೆ. ದಕ್ಷಿಣ ಒಳನಾಡು ಭಾಗಗಳಲ್ಲಿ ಸೆಪ್ಟೆಂಬರ್ 25ರ ನಂತರ ಮಳೆಯ ಪ್ರಮಾಣ ಕಡಿಮೆಯಾಗುವ ಸೂಚನೆಗಳಿವೆ.

ದಕ್ಷಿಣ ಚೀನಾದ ಕರಾವಳಿಯಲ್ಲಿ ಪ್ರಭಲ ಚಂಡಮಾರುತದ ಪ್ರಭಾವದಿಂದ ಬಂಗಾಳಕೊಲ್ಲಿಯಲ್ಲಿ ಗಾಳಿಯ ಬೀಸುವಿಕೆ ಉತ್ತಮವಾಗಿದೆ. ಈ ಚಂಡಮಾರುತವು ಶಿಥಿಲಗೊಳ್ಳುತ್ತಿದ್ದಂತೆಯೇ ಸೆಪ್ಟೆಂಬರ್ 25ರಂದು ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆಗಳಿವೆ. ಇದೇ ಸಮಯದಲ್ಲಿ ವಿಯೆಟ್ನಾಂ, ಇಂಡೋನೇಷ್ಯಾ, ಫಿಲಿಪ್ಪೀನ್ಸ್ ಮಧ್ಯೆ ದಕ್ಷಿಣ ಚೀನಾ ಸಮುದ್ರದಲ್ಲಿ ಇನ್ನೊಂದು ಚಂಡಮಾರುತ ಉಂಟಾಗುವ ಲಕ್ಷಣಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ
ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ
April 1, 2026
6:13 AM
by: ಮಿರರ್‌ ಡೆಸ್ಕ್
ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ
April 1, 2026
6:07 AM
by: ಮಿರರ್‌ ಡೆಸ್ಕ್
ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್
April 1, 2026
5:56 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror