24.09.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಮಳೆಯ ಅವಧಿ ಸ್ವಲ್ಪ ಹೆಚ್ಚಿರಬಹುದು. ಈಗಿನಂತೆ ಈ ಮಳೆಯ ವಾತಾವರಣವು ಈ ತಿಂಗಳ ಅಂತ್ಯದವರೆಗೂ ಮುಂದುವರಿಯುವ ಸಾಧ್ಯತೆಗಳಿವೆ. 27ರಿಂದ ಮಳೆ ಸ್ವಲ್ಪ ಹೆಚ್ಚಾಗುವ ಸೂಚನೆಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ಮಲೆನಾಡು : ಕೊಡಗು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯ ಹಲವು ಭಾಗಗಳಲ್ಲಿ ಮಳೆಯ ಮುನ್ಸೂಚೆನೆ ಇದೆ. ಈಗಿನಂತೆ ಇದೇ ವಾತಾವರಣವು ಸೆಪ್ಟೆಂಬರ್ 26ರ ತನಕ ಮುಂದುವರಿಲಿದ್ದು, ನಂತರ ಮಳೆಯ ಪ್ರಮಾಣವು ಸ್ವಲ್ಪ ಹೆಚ್ಚಾಗಬಹುದು.
ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಹೆಚ್ಚಿನ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಉತ್ತರ ಒಳನಾಡು ಭಾಗಗಳಲ್ಲಿ ಈ ತಿಂಗಳ ಕೊನೆಯವರೆಗೂ ಮಳೆ ಮುಂದುವರಿಯುವ ಲಕ್ಷಣಗಳಿವೆ. ದಕ್ಷಿಣ ಒಳನಾಡು ಭಾಗಗಳಲ್ಲಿ ಸೆಪ್ಟೆಂಬರ್ 25ರ ನಂತರ ಮಳೆಯ ಪ್ರಮಾಣ ಕಡಿಮೆಯಾಗುವ ಸೂಚನೆಗಳಿವೆ.
ದಕ್ಷಿಣ ಚೀನಾದ ಕರಾವಳಿಯಲ್ಲಿ ಪ್ರಭಲ ಚಂಡಮಾರುತದ ಪ್ರಭಾವದಿಂದ ಬಂಗಾಳಕೊಲ್ಲಿಯಲ್ಲಿ ಗಾಳಿಯ ಬೀಸುವಿಕೆ ಉತ್ತಮವಾಗಿದೆ. ಈ ಚಂಡಮಾರುತವು ಶಿಥಿಲಗೊಳ್ಳುತ್ತಿದ್ದಂತೆಯೇ ಸೆಪ್ಟೆಂಬರ್ 25ರಂದು ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆಗಳಿವೆ. ಇದೇ ಸಮಯದಲ್ಲಿ ವಿಯೆಟ್ನಾಂ, ಇಂಡೋನೇಷ್ಯಾ, ಫಿಲಿಪ್ಪೀನ್ಸ್ ಮಧ್ಯೆ ದಕ್ಷಿಣ ಚೀನಾ ಸಮುದ್ರದಲ್ಲಿ ಇನ್ನೊಂದು ಚಂಡಮಾರುತ ಉಂಟಾಗುವ ಲಕ್ಷಣಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ಅಡಿಕೆ ಎಲೆಚುಕ್ಕಿ ರೋಗ ವ್ಯಾಪಕವಾಗಿದೆ. ಮಲೆನಾಡು ತಪ್ಪಲು ಭಾಗಗಳಲ್ಲಿ ಅಡಿಕೆ ಎಲೆಚುಕ್ಕಿ ರೋಗ…
ಉತ್ತರ ಪ್ರದೇಶ ಸರ್ಕಾರವು ಕಿಸಾನ್ ಪಾಠಶಾಲೆ ಕಾರ್ಯಕ್ರಮದ ಮೂಲಕ 2025–26 ಹಂಗಾಮಿನಲ್ಲಿ 20.15…
ಕರಡು ಪೆಸ್ಟಿಸೈಡ್ಸ್ ಮ್ಯಾನೇಜ್ಮೆಂಟ್ ಬಿಲ್–2025 ಕುರಿತು ಸಾರ್ವಜನಿಕ ಅಭಿಪ್ರಾಯಕ್ಕೆ ಕೇಂದ್ರ ಆಹ್ವಾನ ಮಾಡಿದೆ.…
ಕುರಿಸಾಕಾಣಿಕೆ ಅದೇಷ್ಟೋ ಯುವಕರು ತಮ್ಮ ಸ್ವಂತ ಉದ್ಯಮವಾಗಿ ಆಯ್ಕೆ ಮಾಡಿಕೊಂಡಿದ್ದಾರೆ. ಇದರಿಂದ ಹೆಚ್ಚು…
ಯಾವುದೇ ವೃತ್ತಿಯಲ್ಲಿದ್ದರೂ ಕೃಷಿಯನ್ನು ಬಿಡಬಾರದು ಎಂಬ ಹಠದಿಂದ ಜೀವನದಲ್ಲಿ ಯಶಸ್ಸು ಕಂಡವರಲ್ಲಿ ಅಮರಾವತಿ…
ಆರ್ಥಿಕವಾಗಿ ದುರ್ಬಲ ಹೊಂದಿರುವ ಕುಟುಂಬದ ಸದಸ್ಯರಿಗೆ ಆರೋಗ್ಯದಲ್ಲಿ ಏರುಪೇರು ಉಂಟಾದದ ದೊಡ್ಡ ಮಟ್ಟದ…