04.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಇವತ್ತು ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ ಮಳೆಯಾಗುತ್ತಿದೆ. ಈಗಿನಂತೆ ಮುಂದಿನ 10 ದಿನಗಳವರೆಗೂ ಮಳೆ ಮುಂದುವರಿಯುವ ಲಕ್ಷಣಗಳಿದ್ದರೂ ಎಪ್ರಿಲ್ 4ರಿಂದ ವ್ಯಾಪ್ತಿ ಹಾಗೂ ಪ್ರಮಾಣ ಸ್ವಲ್ಪ ಕಡಿಮೆಯಾಗುವ ಲಕ್ಷಣಗಳಿವೆ.
ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರ, ಸಂಜೆ ಹಾಗೂ ರಾತ್ರಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಎಪ್ರಿಲ್ 4 ರಿಂದ ಮಳೆಯ ಪ್ರಮಾಣ ಸ್ವಲ್ಪ ಕಡಿಮೆಯಾಗುವ ಸಾಧ್ಯತೆಗಳಿವೆ.
ಒಳನಾಡು : ಉತ್ತರ ಒಳನಾಡಿನ ಧಾರವಾಡ, ಬೆಳಗಾವಿ ಈಗಾಗಲೇ ಮಳೆಯಾಗಿದ್ದು, ಹಾವೇರಿ, ಗದಗ, ಬಾಗಲಕೋಟೆ, ದಾವಣಗೆರೆ, ಬಳ್ಳಾರಿ, ಕೊಪ್ಪಳ, ರಾಯಚೂರು, ಯಾದಗಿರಿ, ವಿಜಯಪುರ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ ತುಮಕೂರು, ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆಗಳಿದ್ದು ಎಪ್ರಿಲ್ 4 ರಿಂದ ಮಳೆ ಪ್ರಮಾಣ ಕಡಿಮೆಯಾಗುವ ಸೂಚನೆಗಳಿವೆ.
ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮದಿಂದ ಮುಂಗಾರು ಆಗಮನ ನಿರೀಕ್ಷೆಗಿಂತಲೂ ಮೊದಲೇ ಆಗಲಿದೆ. ಜೊತೆಗೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಅಡಿಕೆ ಹಾಳೆ ತಟ್ಟೆಯ ನಿಷೇಧವು ಅಡಿಕೆ ಕೃಷಿಗೆ ನೇರವಾಗಿ ಮಾತ್ರವಲ್ಲ, ಪರೋಕ್ಷವಾಗಿ ಸತತ…
ತಿರುಗಾಟವು ಜ್ಞಾನವೃದ್ಧಿಗೆ ಹೇತು. ಓಡಾಡದವನ ಜ್ಞಾನಕ್ಕೆ ಉಸಿರು ಇರುವುದಿಲ್ಲ. ತಂತ್ರಜ್ಞಾನದ ವಾಯುವೇಗದ ಕಾಲಘಟ್ಟದಲ್ಲಿ…
ದೆಹಲಿಯಲ್ಲಿ ಆಯೋಜಿಸಿದ್ದ 58ನೇ ಜ್ಞಾನಪೀಠ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ, ರಾಷ್ಟ್ರಪತಿ ದ್ರೌಪದಿ ಮುರ್ಮು…
ಮುಂದಿನ 5 ದಿನಗಳ ಕಾಲ ಕೇರಳದಲ್ಲಿಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ…