ಹವಾಮಾನ ವರದಿ | 01-04-2025 | ಎ.2 ರಿಂದ ಮುಂದಿನ 10 ದಿನಗಳವರೆಗೂ ಮಳೆ ಮುನ್ಸೂಚನೆ |

April 1, 2025
3:42 PM
ಇಂದು ಕೆಲವು ಕಡೆ ತುಂತುರು ಮಳೆ ಸಾಧ್ಯತೆ ಇದೆ. ಈಗಿನಂತೆ ಎಪ್ರಿಲ್ 2ರಿಂದ ಕರಾವಳಿ ಜಿಲ್ಲೆಗಳಲ್ಲಿ, ಮಲೆನಾಡಿನ ಬಹುತೇಕ ಭಾಗಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡಿನ ಅಲ್ಲಲ್ಲಿ ಗುಡುಗು ಸಹಿತ ಮುಂದಿನ 10 ದಿನಗಳವರೆಗೂ ಉತ್ತಮ ಮಳೆಯ ಮುನ್ಸೂಚನೆ ಇದಬಂಗಾಳಕೊಲ್ಲಿಯ ತಿರುಗುವಿಕೆಯ ಪರಿಣಾಮದಿಂದ ಈ ಮಳೆ ವಾತಾವರಣವು ಉಂಟಾಗಿದೆ.

02.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ. ಉತ್ತರ ಕನ್ನಡ ಅಲ್ಲಲ್ಲಿ ಮೋಡದ ವಾತಾವರಣದೊಂದಿಗೆ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. ಈಗಿನಂತೆ ಎಪ್ರಿಲ್ 2ರಿಂದ ಕರಾವಳಿ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಗುಡುಗು ಸಹಿತ ಮುಂದಿನ 10 ದಿನಗಳವರೆಗೂ ಉತ್ತಮ ಮಳೆಯ ಮುನ್ಸೂಚನೆ ಇದೆ.

ಮಲೆನಾಡು : ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಅಥವಾ ರಾತ್ರಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ಎಪ್ರಿಲ್ 2ರಿಂದ ಮಲೆನಾಡಿನ ಬಹುತೇಕ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಒಳನಾಡು : ಉತ್ತರ ಒಳನಾಡಿನ ಹಾವೇರಿ, ಧಾರವಾಡ, ಬೆಳಗಾವಿ, ಗದಗ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ. ಗಾಳಿಯ ಪ್ರಭಾವ ಹೆಚ್ಚಿದ್ದರೆ ಉಳಿದ ಭಾಗಗಳಲ್ಲಿಯೂ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಮೈಸೂರಿನ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ಎಪ್ರಿಲ್ 2ರಿಂದ ಉತ್ತರ ಹಾಗೂ ದಕ್ಷಿಣ ಒಳನಾಡಿನ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.  ಬಂಗಾಳಕೊಲ್ಲಿಯ ತಿರುಗುವಿಕೆಯ ಪರಿಣಾಮದಿಂದ ಈ ಮಳೆ ವಾತಾವರಣವು ಉಂಟಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ
October 13, 2026
11:01 PM
by: ಮಹೇಶ್ ಪುಚ್ಚಪ್ಪಾಡಿ
ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ
October 13, 2026
10:36 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ
October 13, 2026
10:15 AM
by: ಸಾಯಿಶೇಖರ್ ಕರಿಕಳ
ಚಿತ್ರದುರ್ಗದಲ್ಲಿ ಕಣ್ಣೆದುರೇ ಒಣಗಿದ ಬೆಳೆ… ರೈತನಿಗೆ ದಿಕ್ಕೇ ತೋಚದ ಸ್ಥಿತಿ – ವಿಶೇಷ ಪ್ಯಾಕೇಜ್‌ಗೆ ರೈತರ ಒತ್ತಾಯ
October 13, 2026
9:55 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror