02.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ. ಉತ್ತರ ಕನ್ನಡ ಅಲ್ಲಲ್ಲಿ ಮೋಡದ ವಾತಾವರಣದೊಂದಿಗೆ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. ಈಗಿನಂತೆ ಎಪ್ರಿಲ್ 2ರಿಂದ ಕರಾವಳಿ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಗುಡುಗು ಸಹಿತ ಮುಂದಿನ 10 ದಿನಗಳವರೆಗೂ ಉತ್ತಮ ಮಳೆಯ ಮುನ್ಸೂಚನೆ ಇದೆ.
ಮಲೆನಾಡು : ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಅಥವಾ ರಾತ್ರಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ಎಪ್ರಿಲ್ 2ರಿಂದ ಮಲೆನಾಡಿನ ಬಹುತೇಕ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಒಳನಾಡು : ಉತ್ತರ ಒಳನಾಡಿನ ಹಾವೇರಿ, ಧಾರವಾಡ, ಬೆಳಗಾವಿ, ಗದಗ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ. ಗಾಳಿಯ ಪ್ರಭಾವ ಹೆಚ್ಚಿದ್ದರೆ ಉಳಿದ ಭಾಗಗಳಲ್ಲಿಯೂ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಮೈಸೂರಿನ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ಎಪ್ರಿಲ್ 2ರಿಂದ ಉತ್ತರ ಹಾಗೂ ದಕ್ಷಿಣ ಒಳನಾಡಿನ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಬಂಗಾಳಕೊಲ್ಲಿಯ ತಿರುಗುವಿಕೆಯ ಪರಿಣಾಮದಿಂದ ಈ ಮಳೆ ವಾತಾವರಣವು ಉಂಟಾಗಿದೆ.
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…