#RuralMirror |ಕರಾವಳಿ ತೀರ ಭಾಗಗಳಲ್ಲಿ ಮಳೆಯ ಮುನ್ಸೂಚನೆ | ಜುಲೈ 17ರಿಂದ ಮಳೆ ಜೋರಾಗುವ ಮುನ್ಸೂಚನೆ | ಉತ್ತರ ಒಳನಾಡುವಿನಲ್ಲಿ ಮಳೆ ಸಾಧ್ಯತೆ

July 16, 2023
1:12 PM
ಕರ್ನಾಟಕದ ಕರಾವಳಿ ತೀರ ಭಾಗಗಳಲ್ಲಿ ಮಳೆ#Rainಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ದಿನಕ್ಕೆ ಎರಡು ಮಳೆಯ ಮುನ್ಸೂಚನೆ

ಮುಂಗಾರು ಮಳೆ ಆರಂಭದಿಂದ ಕಣ್ಣಾಮುಚ್ಚಾಲೆ ಆಟ ಆಡುತ್ತಿದೆ. ಕರಾವಳಿ ಭಾಗದಲ್ಲಿ ತಕ್ಕ ಮಟ್ಟಿಗೆ ಮಳೆ ಬಂದಿದೆಯಾದರು ವಾಡಿಕೆಯ ಮಳೆ ಇಲ್ಲ. ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ತೀರ ಭಾಗಗಳಲ್ಲಿ ಮಳೆ #Rain ಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ದಿನಕ್ಕೆ ಎರಡು ಮಳೆಯ ಮುನ್ಸೂಚನೆ ಇದೆ.

ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಮೋಡದ ಜೋತೆ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಒಳನಾಡು ಭಾಗಗಳಾದ ವಿಜಯಪುರ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದ್ದರೆ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ, ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ವಾತಾವರಣದೊಂದಿಗೆ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ದಕ್ಷಿಣ ಒಳನಾಡು ಭಾಗಗಳಲ್ಲಿ ಮೈಸೂರು, ಹಾಸನ, ಮಂಡ್ಯ, ರಾಮನಗರ, ಬೆಂಗಳೂರು, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. ಮುಂಗಾರು ದುರ್ಬಲತೆ ಮುಂದುವರಿಯಲಿದ್ದು ಕರಾವಳಿ ಭಾಗಗಳಲ್ಲಿ ಜುಲೈ 17ರಿಂದ ಸ್ವಲ್ಪ ಮಟ್ಟಿಗೆ ಚುರುಕಾಗುವ ಲಕ್ಷಣಗಳಿವೆ. ಜುಲೈ 19ರಿಂದ ಮಳೆ ಜೋರಾಗುವ ಮುನ್ಸೂಚನೆ ಇದೆ. ಸಮಯದಲ್ಲಿ ಉತ್ತರ ಒಳನಾಡು ಭಾಗಗಳಲ್ಲಿ ಸಹ ಆಶಾದಾಯಕ ಬೆಳವಣಿಗೆಯಾಗಲಿದ್ದು ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ
September 16, 2026
3:41 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ
September 16, 2026
2:18 PM
by: ಸಾಯಿಶೇಖರ್ ಕರಿಕಳ
ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?
September 16, 2026
7:17 AM
by: ದ ರೂರಲ್ ಮಿರರ್.ಕಾಂ
ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ
September 15, 2026
10:09 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror