ಮುಂಗಾರು ಮಳೆ ಆರಂಭದಿಂದ ಕಣ್ಣಾಮುಚ್ಚಾಲೆ ಆಟ ಆಡುತ್ತಿದೆ. ಕರಾವಳಿ ಭಾಗದಲ್ಲಿ ತಕ್ಕ ಮಟ್ಟಿಗೆ ಮಳೆ ಬಂದಿದೆಯಾದರು ವಾಡಿಕೆಯ ಮಳೆ ಇಲ್ಲ. ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ತೀರ ಭಾಗಗಳಲ್ಲಿ ಮಳೆ #Rain ಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ದಿನಕ್ಕೆ ಎರಡು ಮಳೆಯ ಮುನ್ಸೂಚನೆ ಇದೆ.
ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಮೋಡದ ಜೋತೆ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಒಳನಾಡು ಭಾಗಗಳಾದ ವಿಜಯಪುರ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದ್ದರೆ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ, ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ವಾತಾವರಣದೊಂದಿಗೆ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡು ಭಾಗಗಳಲ್ಲಿ ಮೈಸೂರು, ಹಾಸನ, ಮಂಡ್ಯ, ರಾಮನಗರ, ಬೆಂಗಳೂರು, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. ಮುಂಗಾರು ದುರ್ಬಲತೆ ಮುಂದುವರಿಯಲಿದ್ದು ಕರಾವಳಿ ಭಾಗಗಳಲ್ಲಿ ಜುಲೈ 17ರಿಂದ ಸ್ವಲ್ಪ ಮಟ್ಟಿಗೆ ಚುರುಕಾಗುವ ಲಕ್ಷಣಗಳಿವೆ. ಜುಲೈ 19ರಿಂದ ಮಳೆ ಜೋರಾಗುವ ಮುನ್ಸೂಚನೆ ಇದೆ. ಸಮಯದಲ್ಲಿ ಉತ್ತರ ಒಳನಾಡು ಭಾಗಗಳಲ್ಲಿ ಸಹ ಆಶಾದಾಯಕ ಬೆಳವಣಿಗೆಯಾಗಲಿದ್ದು ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಕರ್ನಾಟಕದಿಂದ ನೈಋತ್ಯ ಮುಂಗಾರು ಸಂಪೂರ್ಣ ಹಿಂದೆ ಸರಿದಿದ್ದು, ಅ.11ರ ಸುಮಾರಿಗೆ ಹಿಂಗಾರು ಆರಂಭಕ್ಕೆ…
ಗದಗ ಜಿಲ್ಲೆಯಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಜಿಲ್ಲಾಡಳಿತ ನಿರ್ಧರಿಸಿದೆ.…
ಯಾದಗಿರಿ ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು, ಸೋಯಾಬೀನ್ ಹಾಗೂ ಸೂರ್ಯಕಾಂತಿ ಖರೀದಿಗೆ…
ಕರಾವಳಿ ಮತ್ತು ಮಲೆನಾಡು ಭಾಗದ ಜನರು ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ…
ಹಾಲಿನ ದರ ಹೆಚ್ಚಳ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ನಿರ್ಧಾರ…
ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆಯಿದ್ದು, ಅ.9…