ಹವಾಮಾನ ವರದಿ | 27-08-2024 | ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮಳೆ |

August 27, 2024
12:02 PM

28.08.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಬಿಟ್ಟು ಬಿಟ್ಟು ಮಳೆಯ ಮುನ್ಸೂಚನೆ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.

ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ( ಪೂರ್ವದ ಮೋಡದಿಂದ, ಗುಡುಗು ಸಾಧ್ಯತೆಯೂ ಇದೆ). ಹಾವೇರಿ, ಧಾರವಾಡ, ಬೆಳಗಾವಿ, ಗದಗ, ಚಿತ್ರದುರ್ಗ, ದಾವಣಗೆರೆ, ಕೊಪ್ಪಳ, ವಿಜಯಪುರ, ಕಲಬುರ್ಗಿ, ಯಾದಗಿರಿ ಹಾಗೂ ಬೀದರ್ ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಮಳೆ ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಈಗಿನಂತೆ ಗುಜರಾತ್ ವಾಯುಭಾರ ಕುಸಿತದ ಚಲನೆಯು ನಿಧಾನವಾಗುತ್ತಿದ್ದು, ಆಗಸ್ಟ್ 30ರಂದು ಅರಬ್ಬಿ ಸಮುದ್ರಕ್ಕೆ ಪ್ರವೇಶಿಸುತ್ತಿದ್ದಂತೆಯೇ ದುರ್ಬಲಗೊಳ್ಳವ ಲಕ್ಷಣಗಳಿವೆ. ಇದೇ ಸಮಯದಲ್ಲಿ ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶ ಗಡಿಭಾಗದಲ್ಲಿ ಇನ್ನೊಂದು ತಿರುಗುವಿಕೆ ಉಂಟಾಗುವ ಲಕ್ಷಣಗಳಿವೆ. ಸೆಪ್ಟೆಂಬರ್ 1 ರಿಂದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆ ಕಡಿಮೆಯಾಗುವ ಲಕ್ಷಣಗಳಿದ್ದರೂ ,ಉತ್ತರ ಭಾರತದ ಪರಿಸ್ಥಿತಿಯ ಮೇಲೆ ಅವಲಂಬಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ
April 2, 2026
6:56 AM
by: ಅರುಣ್‌ ಕುಮಾರ್ ಕಾಂಚೋಡು
ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ
April 2, 2026
6:37 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!
April 1, 2026
2:30 PM
by: ಸಾಯಿಶೇಖರ್ ಕರಿಕಳ
ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror