25.09.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಮೋಡದ ವಾತಾವರಣದೊಂದಿಗೆ ಆಗಾಗ ಮಳೆಯ ಮುನ್ಸೂಚನೆ ಇದೆ. ಕರಾವಳಿ ತೀರ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಸೆಪ್ಟೆಂಬರ್ 25ರಂದು ಉತ್ತರ ಕನ್ನಡದಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ. ಸೆಪ್ಟೆಂಬರ್ 26ರಿಂದ ಕರಾವಳಿ ಭಾಗಗಳಲ್ಲಿ ಮಳೆ ಕಡಿಮೆಯಾದರೂ ಸಾಮಾನ್ಯ ಮಳೆಯು ಸೆಪ್ಟೆಂಬರ್ 28 ಅಥವಾ 29ರ ವರೆಗೆ ಮುಂದುವರಿಯುವ ಲಕ್ಷಣಗಳಿವೆ.
ಮಲೆನಾಡು : ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಒಂದೆರಡು ಕಡೆ ಹೆಚ್ಚಿರಬಹುದು. ಹಾಸನ ಜಿಲ್ಲೆಯಲ್ಲಿ ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಮಲೆನಾಡು ಭಾಗಗಳಲ್ಲಿ ಮುಂದಿನ 10 ದಿನಗಳವರೆಗೂ ಉತ್ತಮ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸೆಪ್ಟೆಂಬರ್ 25ರ ವರೆಗೂ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ.
ಒಳನಾಡು : ಉತ್ತರ ಒಳನಾಡಿನ ವಿಜಯಪುರ, ರಾಯಚೂರು,ಕಲಬುರ್ಗಿ, ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಕೊಪ್ಪಳ, ಬಳ್ಳಾರಿ, ದಾವಣಗೆರೆ, ಯಾದಗಿರಿ ಜಿಲ್ಲೆಗಳ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ ( ಕೊಳ್ಳೇಗಾಲ ಭಾಗಗಳಲ್ಲಿ), ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಸೆಪ್ಟೆಂಬರ್ 25ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆ ಕ್ಷೀಣಿಸುವ ಲಕ್ಷಣಗಳಿದ್ದರೆ, 26ರಿಂದ ಉತ್ತರ ಒಳನಾಡು ಭಾಗಗಳಲ್ಲಿ ಸಹ ಮಳೆ ಕಡಿಮೆಯಾಗುವ ಸೂಚನೆಗಳಿವೆ. ಸೆಪ್ಟೆಂಬರ್ 29ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ ಆರಂಭವಾಗುವ ಲಕ್ಷಣಗಳಿವೆ ಹಾಗೂ ಒಕ್ಟೊಬರ್ 1 ರಿಂದ ಉತ್ತರ ಒಳನಾಡಿನ ಒಂದೆರಡು ಕಡೆ ಮಳೆಯ ಸಾಧ್ಯತೆ ಇದೆ.
ಭಾರತದ ಮೇಲೆ ನೈಋತ್ಯ ಮಾನ್ಸೂನ್‌ನ ಆರಂಭದ ದಿನಾಂಕಗಳ ಪ್ರಕಾರ ಸಾಮಾನ್ಯವಾಗಿ ಮೇ.21 ಅಥವಾ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 953515649
ಭಾರತವು ಭಯೋತ್ಪಾದನೆಯನ್ನು ಸಹಿಸುವುದಿಲ್ಲ, ಪ್ರತಿಕ್ರಿಯಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಮುಂಗಾರು ಅವಧಿಗೂ ಮುನ್ನವೇ ಆರಂಭವಾಗುವ ವರದಿಗಳು ಬರುತ್ತಿವೆ. ಈಗಾಗಲೇ ಹಿಂದುಮಹಾಸಾಗರ ಭಾಗದಿಂದ ಅರಬ್ಬಿ…
ಕೃಷಿ ಕ್ಷೇತ್ರ ಅಭಿವೃದ್ಧಿಗಾಗಿ ಮುಳಿಯದ ಸಂಸ್ಥೆ ಸಹಯೋಗದಲ್ಲಿ ಕೃಷಿ ಅಕಾಡೆಮಿ ರಚನೆ ಮಾಡುವ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490