28.08.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಬಿಟ್ಟು ಬಿಟ್ಟು ಮಳೆಯ ಮುನ್ಸೂಚನೆ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.
ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ( ಪೂರ್ವದ ಮೋಡದಿಂದ, ಗುಡುಗು ಸಾಧ್ಯತೆಯೂ ಇದೆ). ಹಾವೇರಿ, ಧಾರವಾಡ, ಬೆಳಗಾವಿ, ಗದಗ, ಚಿತ್ರದುರ್ಗ, ದಾವಣಗೆರೆ, ಕೊಪ್ಪಳ, ವಿಜಯಪುರ, ಕಲಬುರ್ಗಿ, ಯಾದಗಿರಿ ಹಾಗೂ ಬೀದರ್ ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಮಳೆ ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಗುಜರಾತ್ ವಾಯುಭಾರ ಕುಸಿತದ ಚಲನೆಯು ನಿಧಾನವಾಗುತ್ತಿದ್ದು, ಆಗಸ್ಟ್ 30ರಂದು ಅರಬ್ಬಿ ಸಮುದ್ರಕ್ಕೆ ಪ್ರವೇಶಿಸುತ್ತಿದ್ದಂತೆಯೇ ದುರ್ಬಲಗೊಳ್ಳವ ಲಕ್ಷಣಗಳಿವೆ. ಇದೇ ಸಮಯದಲ್ಲಿ ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶ ಗಡಿಭಾಗದಲ್ಲಿ ಇನ್ನೊಂದು ತಿರುಗುವಿಕೆ ಉಂಟಾಗುವ ಲಕ್ಷಣಗಳಿವೆ. ಸೆಪ್ಟೆಂಬರ್ 1 ರಿಂದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆ ಕಡಿಮೆಯಾಗುವ ಲಕ್ಷಣಗಳಿದ್ದರೂ ,ಉತ್ತರ ಭಾರತದ ಪರಿಸ್ಥಿತಿಯ ಮೇಲೆ ಅವಲಂಬಿಸಿದೆ.
ರಾಜ್ಯದ 28.84 ಲಕ್ಷ ಹಾಲು ಉತ್ಪಾದಕರಿಗೆ ನೀಡಬೇಕಾದ ₹486 ಕೋಟಿ ಪ್ರೋತ್ಸಾಹಧನ ಬಾಕಿ…
ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಿದ್ದು, ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ…
ನವೆಂಬರ್ ಮೊದಲ ವಾರದಲ್ಲಿ ₹300ರ ಗರಿಷ್ಠ ಮಟ್ಟ ತಲುಪಿದ್ದ ರಬ್ಬರ್ ಧಾರಣೆ ಮೂರು…
ಎಸ್‌ಎಸ್‌ಎಲ್‌ಸಿ ಪರೀಕ್ಷಾ ಅವಧಿಯಲ್ಲಿ ಹೈಸ್ಕೂಲ್ ಶಿಕ್ಷಕರನ್ನು ಜನಗಣತಿ ಸೇರಿದಂತೆ ಇತರ ಕರ್ತವ್ಯಗಳಿಗೆ ನಿಯೋಜಿಸುವುದಿಲ್ಲ…
ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಶಿರಪುರ ಮಾದರಿಯಲ್ಲಿ 200 ಕೋಟಿ ರೂಪಾಯಿ ವೆಚ್ಚದ…
ಕರ್ನಾಟಕದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ನವೆಂಬರ್ 28ರಂದು…