ಹವಾಮಾನ ವರದಿ | 03-09-2025 | ಕರಾವಳಿ ಜಿಲ್ಲೆಯಲ್ಲಿ ಅನಿರೀಕ್ಷಿತ ಹವಾಮಾನ ಬದಲಾವಣೆ

September 3, 2025
11:12 AM
ಬಂಗಾಳಕೊಲ್ಲಿಯ ಒಡಿಸ್ಸಾ ಕರಾವಳಿ ತಲಪಿರುವ ವಾಯುಭಾರ ಕುಸಿತವು, ಸೆಪ್ಟೆಂಬರ್ 5ರ ಸುಮಾರಿಗೆ ಉತ್ತರ ಮಹಾರಾಷ್ಟ್ರ, ಗುಜರಾತ್ ಕರಾವಳಿಗೆ ತಲಪುವ ನಿರೀಕ್ಷೆಯಿದೆ.

04.09.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಪಶ್ಚಿಮ ಬಂಗಾಳ ಮೂಲಕ ಉತ್ತರಕ್ಕೆ ಚಲಿಸುವ ಸೂಚನೆಗಳಿದ್ದರೂ, ನಿನ್ನೆ ರಾತ್ರಿ ಪಥ ಬದಲಿಸಿ ಒಡಿಸ್ಸಾ ಕರಾವಳಿ ಮೂಲಕ ಮುನ್ನುಗ್ಗಿದ ಪರಿಣಾಮವಾಗಿ ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಅನಿರೀಕ್ಷಿತ ಉತ್ತಮ ಮಳೆಯಾಗಿದೆ.
ಇವತ್ತು ಸಹ ಕರಾವಳಿ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಮಳೆ ಮುಂದುವರಿಯುವ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಮಳೆಯ ಹೆಚ್ಚಿರುವ ಸಾಧ್ಯತೆ ಇದೆ. ಈ ವಾತಾವರಣವು ಸೆಪ್ಟಂಬರ್ 7 ರ ತನಕ ಮುಂದುವರಿಯಲಿದೆ.

ಮಲೆನಾಡು : ಕೊಡಗು, ಹಾಸನ ಜಿಲ್ಲೆಗಳಲ್ಲಿ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಬಿಟ್ಟು ಬಿಟ್ಟು ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಹೆಚ್ಚಿರಬಹುದು.
ಈಗಿನಂತೆ ಸೆಪ್ಟೆಂಬರ್ 4ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದರೂ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸೆಪ್ಟೆಂಬರ್ 5 ರ ತನಕ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಒಳನಾಡು : ಧಾರವಾಡ, ಹಾವೇರಿ, ಬಾಗಲಕೋಟೆ, ವಿಜಯನಗರ, ದಾವಣಗೆರೆ, ಬಳ್ಳಾರಿ ಜಿಲ್ಲೆಗಳ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಜೊತೆಗೆ ಒಂದೆರಡು ತುಂತುರು ಮಳೆಯ ಸಾಧ್ಯತೆ ಇದೆ.  ದಕ್ಷಿಣ ಒಳನಾಡಿನ ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.

ಬಂಗಾಳಕೊಲ್ಲಿಯ ಒಡಿಸ್ಸಾ ಕರಾವಳಿ ತಲಪಿರುವ ವಾಯುಭಾರ ಕುಸಿತವು, ಸೆಪ್ಟೆಂಬರ್ 5 ರ ಸುಮಾರಿಗೆ ಉತ್ತರ ಮಹಾರಾಷ್ಟ್ರ, ಗುಜರಾತ್ ಕರಾವಳಿಗೆ ತಲಪುವ ನಿರೀಕ್ಷೆಯಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಕೃಷಿ ಯೋಜನೆಯ ಪ್ರಗತಿಯಲ್ಲಿ ತುಮಕೂರಿಗೆ ರಾಜ್ಯದಲ್ಲೇ ಮೊದಲ ಸ್ಥಾನ
October 12, 2026
12:17 PM
by: ದ ರೂರಲ್ ಮಿರರ್.ಕಾಂ
ಬರಗಾಲದಲ್ಲೂ ಬೆಳೆ ಉಳಿಸಿದ ಸಾವಯವ ಕೃಷಿ – ಸಾವಯವ ಕೃಷಿ ಅಬ್ಬರಿಸಿ ಬರುವುದಿಲ್ಲ- ಮುಗ್ಗರಿಸಿ ಬೀಳುವುದಿಲ್ಲ..!
October 12, 2026
7:30 AM
by: ಮಹೇಶ್ ಪುಚ್ಚಪ್ಪಾಡಿ
ರಾಜ್ಯಾದ್ಯಂತ ನವರಾತ್ರಿ ಸಂಭ್ರಮ : ಶಕ್ತಿಪೀಠಗಳಲ್ಲಿ ವಿಶೇಷ ಪೂಜೆ, ಮಂಗಳೂರು–ಮಡಿಕೇರಿ–ಶ್ರೀರಂಗಪಟ್ಟಣದಲ್ಲಿ ದಸರಾ ಸಂಭ್ರಮ
October 11, 2026
10:37 AM
by: ದ ರೂರಲ್ ಮಿರರ್.ಕಾಂ
ಪಶ್ಚಿಮ ಘಟ್ಟ ಉಳಿಸಿ, ಉತ್ತರ ಕನ್ನಡ ರಕ್ಷಿಸಿ : ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಗೆ ವಿರೋಧ
October 11, 2026
10:24 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror